ಸುಳ್ಯ: ಗಡಿ ಗ್ರಾಮವಾದ ದೇಲಂಪಾಡಿ ಪಂಚಾಯತಿನ ಬೆಳ್ಳಿಪ್ಪಾಡಿ ಭಾಗದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದೆ. ಮೂರು ದಿನಗಳಿಂದ ಆನೆ ಹಾವಳಿ ನಡೆಸಿದೆ.
ಆನೆಗಳ ಹಿಂಡು ಮಂಗಳವಾರ ರಾತ್ರಿಯೂ ತೋಟಗಳಿಗೆ ನುಗ್ಗಿ ವ್ಯಾಪಕವಾಗಿ ಕೃಷಿ ಹಾನಿ ಮಾಡಿದೆ. ಬಾಳೆ, ತೆಂಗು, ಅಡಿಕೆ ಮತ್ತಿತರ ಕೃಷಿಗಳನ್ನು ನಾಶಪಡಿಸಿದೆ. ಆನೆಗಳ ಹಿಂಡು ಜನವಸತಿ ಪ್ರದೇಶದ ಬಳಿಯಲ್ಲಿಯೇ ಬೀಡು ಬಿಟ್ಟಿದ್ದು ಸ್ಥಳೀಯರು ಭಯಭೀತರಾಗಿದ್ದಾರೆ.
ಪಟಾಕಿ ಸಿಡಿಸಿ, ತಮಟೆ ಬಾರಿಸಿ ಆನೆಗಳನ್ನು ಕಾಡಿಗೆ ಅಟ್ಟಲು ಪ್ರಯತ್ನ ನಡೆಸುತ್ತಿದ್ದರೂ ಆನೆಗಳು ದೂರ ಹೋಗುತ್ತಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ. ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿ ಗ್ರಾಮಗಳು ಕಳೆದ ಅನೇಕ ವರುಷಗಳಿಂದ ಆನೆ ದಾಳಿಗೆ ಸಿಲುಕಿ ನಲುಗಿ ಹೋಗಿದೆ. ಇದೀಗ ಮತ್ತೆ ಗಜ ಪಡೆ ಭೀತಿ ಹುಟ್ಟಿಸುತ್ತಿದೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.