ಬೇಡಿಕೆ ಈಡೇರದಿದ್ದರೆ ಶಾಸಕರ ಮನೆ ಮುಂದೆ ಪ್ರತಿಭಟನೆ- ಟೈಲರ್ಸ್ ಎಸೋಸಿಯೇಶನ್

November 24, 2019
8:41 AM

ಸುಳ್ಯ: ಕಳೆದ 20 ವರ್ಷಗಳಿಂದ ಸರಕಾರದ ಮುಂದೆ ವಿವಿಧ ಬೇಡಿಕೆಗಳನ್ನು ಇಟ್ಟಿದ್ದೆವು. ಅದರಲ್ಲಿ ಮುಖ್ಯವಾದ ಕೆಲವು ಬೇಡಿಕೆಗಳನ್ನು ಕರ್ನಾಟಕದ ಎಲ್ಲಾ ಶಾಸಕರಿಗೆ ಪ್ರತ್ಯೇಕವಾಗಿ ಮತ್ತೆ ಮನವಿ ಮೂಲಕ ಸಲ್ಲಿಸಲಾಗಿದೆ. ಮುಂದಿನ ಬಜೆಟ್‍ನಲ್ಲಿ ಟೈಲರ್ಸ್ ವೃತ್ತಿ ಬಾಂಧವರ ಈ ಬೇಡಿಕೆಗಳು ಈಡೇರದೇ ಇದ್ದರೆ ಎಸೋಸಿಯೇಶನ್ ವತಿಯಿಂದ ರಾಜ್ಯದಾದ್ಯಂತ ಎಲ್ಲಾ ಶಾಸಕರ ಮನೆಯ ಮುಂದೆ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಪದಾಧಿಕಾರಿಗಳು ಹೇಳಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯ ಕ್ಷೇತ್ರದ ಶಾಸಕ ಎಸ್.ಅಂಗಾರ ಅವರಿಗೆ ಮನವಿ ಸಲ್ಲಿಸಲಾಗಿದೆ. ಬೇಡಿಕೆ ಈಡೇರಿಸುವ ಭರವಸೆ ಇದೆ. ಮುಖ್ಯವಾಗಿ ಐದು ಬೇಡಿಕೆಗಳನ್ನು ಮುಂದಿರಿಸಲಾಗಿದ್ದು ಇದು ಈಡೇರದಿದ್ದರೆ ರಾಜ್ಯ ಸಮಿತಿಯ ಕರೆಯಂತೆ ಸುಳ್ಯದಲ್ಲಿಯೂ ಶಾಸಕರ ಮನೆಯ ಮುಂದೆ ಧರಣಿ ನಡೆಸಲಾಗುವುದು ಎಂದರು. ಹೊಲಿಗೆ ಕೆಲಸಗಾರರಿಗೆ ಭವಿಷ್ಯ ನಿಧಿ ಯೋಜನೆ ಜಾರಿಯಾಗಿದ್ದು ಕೂಡಲೇ ಅನುಷ್ಠಾನ ಮಾಡಬೇಕು, ಪ್ರಧಾನಮಂತ್ರಿ ಶ್ರಮಿಕ್ ಮಾನ್ದನ್ ಯೋಜನೆಗೆ 18ರಿಂದ 40 ವರ್ಷದವರೆಗೆ ಪ್ರಾಯದವರಿಗೆ ಮಾತ್ರ ಅವಕಾಶವಿದ್ದು ಅದನ್ನು 55 ವರ್ಷದವರೆಗೆ ವಿಸ್ತರಿಸಬೇಕು, ಪ್ರಧಾನಮಮತ್ರಿ ಜೀವನ್ ಜ್ಯೋತಿ ಭೀಮಾ ಪ್ರಥಮ ಕಂತನ್ನು ಫಲಾನುಭವಿಯೇ ಭರಿಸುವುದು ಮತ್ತು ನಂತರದ ಕಂತಿನ ಶೆ.50ನ್ನು ರಾಜ್ಯ ಸರಕಾರ ಭರಿಸಬೇಕು, ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯ ಪ್ರಥಮ ಕಂತನ್ನು ಫಲಾನುಭವಿಯೇ ಭರಿಸುವುದು ಮತ್ತು ನಂತರದ ಕಂತನ್ನು ರಾಜ್ಯ ಸರಕಾರ ಭರಿಸಬೇಕು. ಹೊಲಿಗೆ ಕೆಲಸಗಾರರ ಹೆಣ್ಣುಮಕ್ಕಳಿಗೆ ಹಾಗು ಹೊಲಿಗೆ ಕೆಲಸ ನಿರ್ವಹಿಸುವ ಹೆಣ್ಣು ಮಕ್ಕಳಿಗೆ 50,000 ವಿವಾಹಧನ ನೀಡಬೇಕು ಮೊದಲಾದ ಬೇಡಿಕೆಗಳನ್ನು ಮುಂದಿರಿಸಲಾಗಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ದಿವಾಕರ.ಡಿ.ಟಿ, ಪ್ರಧಾನ ಕಾರ್ಯದರ್ಶಿ ಶರ್ಮಿಳಾ ವಿ.ರೈ, ಮಾಜಿ ಅಧ್ಯಕ್ಷರಾದ ಕುಸುಮಾಧರ ಬೂಡು, ವಿಜಯಕುಮಾರ್ ಉಪಸ್ಥಿತರಿದ್ದರು.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ
August 11, 2025
8:43 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್
August 11, 2025
7:27 AM
by: ದ ರೂರಲ್ ಮಿರರ್.ಕಾಂ
ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ
August 10, 2025
7:00 AM
by: ನಾ.ಕಾರಂತ ಪೆರಾಜೆ
ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ
August 9, 2025
7:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group