ಸುಳ್ಯ : ಸುಳ್ಯ ತಾಲೂಕಿನ ಬೆಳ್ಳಾರೆ- ಸವಣೂರು ರಸ್ತೆಯ ಮುಕ್ಕೂರು ಸನಿಹದ ಕಾಯರ್ಮಾರ್ ಬಳಿ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.
ಸ್ಕೂಟಿ ಸವಾರ ಪೆರುವಾಜೆ ಗ್ರಾಮದ ಅಡ್ಯತಕಂಡ ನಿವಾಸಿ ಪುರುಷೋತ್ತಮ ಗೌಡ ಅಡ್ಯತಕಂಡ (42) ಅವರು ಮೃತಪಟ್ಟ ದುರ್ದೈವಿ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಆ.24 ರಂದು ರಾತ್ರಿ ಅಪಘಾತ ಸಂಭವಿಸಿತ್ತು. ತಕ್ಷಣ ಆಸ್ಪತ್ರೆ ಗೆ ಕೊಂಡೊಯ್ಯಲಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪುರುಷೋತ್ತಮ ಗೌಡ ಅವರು ಮುಕ್ಕೂರು ಪೆರುವಾಜೆ ಶ್ರೀ ಶಾರದೋತ್ಸವ ಸಮಿತಿ ಇದರ ಸ್ಥಾಪಕ ಅಧ್ಯಕ್ಷರಾಗಿಯು ಸೇವೆ ಸಲ್ಲಿಸಿದ್ದರು.
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…
ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…
ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…
ಕರ್ನಾಟಕದಲ್ಲಿ ಸದ್ಯಕ್ಕೆ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿಗೊಳಿಸುವ ಯಾವುದೇ ನಿರ್ಧಾರ ಸರ್ಕಾರದ ಮುಂದಿಲ್ಲ…
ಸೂಪರ್ ಎಲ್ ನಿನೋದಿಂದ 2027ರ ಫೆಬ್ರವರಿವರೆಗೆ ಸಾಮಾನ್ಯ ವರ್ಷಕ್ಕಿಂತ 4.51 ಲಕ್ಷ ತಾಪಮಾನ…