ಸುಳ್ಯ. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ.
ಕೆಪಿಸಿಸಿ ಕಾರ್ಯದರ್ಶಿ ಯಾಗಿ ಕರ್ತವ್ಯ ನಿರ್ವಹಿಸಿದಾಗ ಆರು ಬ್ಲಾಕ್ ಗಳ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದೆ. ಕೆಪಿಸಿಸಿ ಕಾರ್ಯದರ್ಶಿಯಂತಹಾ ಹುದ್ದೆಯನ್ನು ನಿರ್ವಹಿಸಿ ಮತ್ತೆ ಬ್ಲಾಕ್ ಕಾಂಗ್ರೆಸ್ ಹುದ್ದೆಯನ್ನು ವಹಿಸಿಕೊಳ್ಳುವುದಿಲ್ಲ. ಈಗಿನ ಅಧ್ಯಕ್ಷರು ನೀಡಿದ ರಾಜಿನಾಮೆ ಅಂಗೀಕಾರ ಆದರೆ ಹೈಕಮಾಂಡ್ ಸೂಕ್ತ ಅಭ್ಯರ್ಥಿಯನ್ನು ಅಧ್ಯಕ್ಷಾರನ್ನಾಗಿ ನೇಮಕ ಮಾಡಬಹುದು. ನಮ್ಮಲ್ಲಿ ಸಾಕಷ್ಟು ಮಂದಿ ಅರ್ಹರು ಇದ್ದಾರೆ. ಕಾಂಗ್ರೆಸ್ ಅಧ್ಯಕ್ಷರ ರಾಜಿನಾಮೆ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಕಾಂಗ್ರೆಸ್ ನ ಸಭೆಯಲ್ಲಿ ಉಂಟಾದ ಭಿನ್ನಮತದ ಬಗ್ಗೆ ಹೊರಗೆ ಮಾತನಾಡುವುದಿಲ್ಲ. ಅಂತಹಾ ವಿಷಯಗಳನ್ನು ಪಕ್ಷದ ವೇದಿಕೆಯಲ್ಲಿ ಮಾತ್ರ ಚರ್ಚೆ ಮಾಡುತ್ತೇವೆ. ಸಾಂದರ್ಭಿಕ ಕಾರಣಗಳಿಂದ ಸಭೆಯಲ್ಲಿ ಚರ್ಚೆ ನಡೆದಿದೆಯೇ ಹೊರತು ಭಿನ್ನಮತ ಕಾರಣ ಅಲ್ಲ ಎಂದು ಅವರು ಹೇಳಿದರು. ಕೆಪಿಸಿಸಿ ಪುನಾರಚನೆ ಸಂದರ್ಭ ಸುಳ್ಯದ ನಾಯಕರಿಗೆ ಸೂಕ್ತ ಸ್ಥಾನ ಮತ್ತೆ ದೊರಕುವ ವಿಶ್ವಾಸ ಇದೆ ಎಂದರು.
ಕೆಲಸ ಕಾಂಗ್ರೇಸ್ ನವರದ್ದು ಮತ ಬಿಜೆಪಿಗೆ:
ಅಂಗಡಿಮಜಲು ಸೇತುವೆ, ಅರಂಬೂರು ಸೇತುವೆ, ಬೆಂಡೋಡಿ ಸೇತುವೆ ಹೀಗೆ ಎಲ್ಲಾ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ತರುವುದು ಕಾಂಗ್ರೆಸ್. ಆದರೆ ಇಲ್ಲೆಲ್ಲಾ ಜನ ಮತ ಹಾಕುವುದು ಮಾತ್ರ ಬಿಜೆಪಿಗೆ. ಕೆಲಸ ಮಾಡುವವರಿಗೆ ಜನ ಮತ ನೀಡುತ್ತಿಲ್ಲ ಎಂಬ ನೋವು ಇದೆ ಎಂದು ಎಂ.ವೆಂಕಪ್ಪ ಗೌಡ ಹೇಳಿದರು. ಲೋಕಸಭಾ ಚುನಾವಣೆಯ ಫಲಿತಾಂಶವು ನಗರ ಪಂಚಾಯತ್ ಚುನಾವಣೆ ಮೇಲೂ ಪರಿಣಾಮ ಬೀರಿ ಕಾಂಗ್ರೆಸ್ ಗೆ ಸೋಲುಂಟಾಗಲು ಕಾರಣವಾಯಿತು ಎಂದು ಅವರು ಹೇಳಿದರು.
ಸುದ್ದಿ ಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ, ನಗರ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಭಟ್ ಕೊಡೆಂಕೇರಿ, ಶರೀಫ್ ಕಂಠಿ, ಧೀರಾ ಕ್ರಾಸ್ತಾ ಉಪಸ್ಥಿತರಿದ್ದರು.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…