ಭಜನೆಯಿಂದ ಪ್ರೀತಿ-ವಿಶ್ವಾಸದೊಂದಿಗೆ ಸಮಾಜದ ಸಂಘಟನೆ

December 16, 2019
7:51 PM

ಉಜಿರೆ: ಭಜನೆಯಿಂದ ಮಾನಸಿಕ ಏಕಾಗ್ರತೆ ಹೆಚ್ಚಾಗುತ್ತದೆ. ಕೂಡುಕುಟುಂಬದಂತೆ ಪರಸ್ಪರ ಪ್ರೀತಿ-ವಿಶ್ವಾಸದಿಂದ ಸಾಮಾಜಿಕ ಸಂಘಟನೆಯಾಗುತ್ತದೆ ಎಂದು ಧರ್ಮಸ್ಥಳದ ಸುಪ್ರಿಯಾ ಹರ್ಷೇಂದ್ರಕುಮಾರ್ ಹೇಳಿದರು.

Advertisement
Advertisement
Advertisement
Advertisement

ಭಾನುವಾರ ಬೆಳ್ತಂಗಡಿಯಲ್ಲಿ ಎಸ್.ಡಿ.ಎಂ.ಕಲಾ ಭವನದಲ್ಲಿ ಬೆಳ್ತಂಗಡಿ ಜೈನ್ ಮಿಲನ್ ಪ್ರಾಯೋಜಕತ್ವದಲ್ಲಿ ನಡೆದ ಮಂಗಳೂರು ವಿಭಾಗದ ಜಿನ ಭಜನಾ ಸ್ಪರ್ಧೆಯಲ್ಲಿ ಅವರು ಸಮಾರೋಪ ಭಾಷಣ ಮಾಡಿ ಬಹುಮಾನ ವಿತರಿಸಿದರು. ಧರ್ಮಸ್ಥಳದಲ್ಲಿ ಪ್ರತಿ ವರ್ಷ ನಡೆಸುವ ಭಜನಾ ತರಬೇತಿ ಕಮ್ಮಟದಿಂದಾಗಿ ಈಗ ಯುವಜನತೆ ಕೂಡಾ ಆಸಕ್ತಿಯಿಂದ ಭಜನೆ ಮಾಡುವುದು ಆಶಾದಾಯಕವಾಗಿದೆ. ಉತ್ತಮ ಸಾಹಿತ್ಯವನ್ನು ಬಳಸಿ ಹೊಸ ಹಾಡುಗಳನ್ನು ರಚಿಸಿ ಸಾಮೂಹಿಕ ಭಜನೆ ಮಾಡಬೇಕು. ಹಿಮ್ಮೇಳ ಇಲ್ಲದೆಯೂ ಭಜನೆ ಹಾಡಬಹುದು ಎಂದು ಅವರು ಸಲಹೆ ನೀಡಿದರು. ಜನಪದ ಶೈಲಿಯ ಗೀತೆಗಳನ್ನು ಸಂಗ್ರಹಿಸಿ ತಾವು “ಬಾಹುಬಲಿ ಗೀತಾಂಜಲಿ”ಯ ಎರಡು ಆವೃತ್ತಿಗಳನ್ನು ಪ್ರಕಟಿಸಿದ್ದು, ಉತ್ತಮ ಪ್ರತಿಕ್ರಿಯೆ ದೊರಕಿರುವುದರಿಂದ ಮೂರನೆ ಆವೃತ್ತಿಯನ್ನು ಪ್ರಕಟಿಸಲು ಸಿದ್ಧತೆ ನಡೆಸುತ್ತಿರುವುದಾಗಿ ಅವರು ತಿಳಿಸಿದರು. ಸ್ಪರ್ಧೆಗಳಲ್ಲಿ ಸೋಲು-ಗೆಲುವು, ಆಶೆ-ನಿರಾಶೆ ಸಹಜವಾದುದು. ಎಲ್ಲವನ್ನೂ ಸಮಚಿತ್ತದಿಂದ ಸ್ವೀಕರಿಸಿ ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು ಎಂದು ಅವರು ಕಿವಿಮಾತು ಹೇಳಿದರು.

Advertisement

ಧರ್ಮಸ್ಥಳದ ಡಿ. ಹರ್ಷೇಂದ್ರಕುಮಾರ್, ಮಂಗಳೂರಿನ ಪುಷ್ಪರಾಜಜೈನ್, ಬೆಳ್ತಂಗಡಿಯ ಪಾರ್ಶ್ವನಾಥ್‍ಜೈನ್ ಮತ್ತುಉಡುಪಿಯ ಪ್ರಸನ್ನಕುಮಾರ್ ಉಪಸ್ಥಿತರಿದ್ದರು.
ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಶುಭಾಶಂಸನೆ ಮಾಡಿ ಪ್ರತಿ ಮನೆಯಲ್ಲಿಯೂ ರಾಗ-ತಾಳ-ಲಯ ಬದ್ಧವಾಗಿ ಸರಾಗವಾಗಿ ಭಜನೆಯ ನಿನಾದ ಕೇಳಿದರೆ ಭಜನಾ ಸ್ಪರ್ಧೆಯ ಪ್ರಯತ್ನ ಸಾರ್ಥಕವಾಗುತ್ತದೆ. ಭಜನಾ ಸಂಸ್ಕೃತಿ ಉಳಿಸಿ, ಬೆಳೆಸಿದಾಗ ಧರ್ಮ ಪ್ರಭಾವನೆಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಮಂಗಳೂರು ಜೈನ್ ಮಿಲನ್ ಕಾರ್ಯದರ್ಶಿ ಸುಭಾಶ್ಚಂದ್ರಜೈನ್‍ ಧನ್ಯವಾದವಿತ್ತರು.

ಉಜಿರೆಯ ಎಸ್.ಡಿ.ಎಂ. ಕಾಲೇಜು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಉಪನ್ಯಾಸಕ ಪ್ರೊ.ಸುವೀರ್ ಜೈನ್‍ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜ.26 | ಸಾರಡ್ಕದಲ್ಲಿ ಕೃಷಿ ಹಬ್ಬ | ವಿವಿಧ ಗೋಷ್ಠಿಗಳು |
January 25, 2025
5:01 PM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕನ್ನಡ ದೇವತೆ ನೇಮ | ತುಳುನಾಡಿನಲ್ಲಿ ಈಗ ನೇಮ-ನಡಾವಳಿ ದಿನಗಳು |
January 21, 2025
3:50 PM
by: ದ ರೂರಲ್ ಮಿರರ್.ಕಾಂ
ಮಂಗಳೂರು | ಕದ್ರಿ ಉದ್ಯಾನದಲ್ಲಿ ಜ.23 ರಿಂದ  ಫಲಪುಷ್ಪ ಪ್ರದರ್ಶನ | 20 ಸಾವಿರಕ್ಕೂ ಅಧಿಕ ಹೂವಿನ ಗಿಡಗಳ ಪ್ರದರ್ಶನ |
January 11, 2025
7:18 AM
by: The Rural Mirror ಸುದ್ದಿಜಾಲ
ಧರ್ಮಸ್ಥಳದಲ್ಲಿ ಭಕ್ತರ ಗಡಣ | ಭಕ್ತರಿಂದ ಅಲಂಕಾರ ಸೇವೆ
January 1, 2025
9:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror