ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಒಟ್ಟು 6 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ದೃಢ ಪಟ್ಟಿದೆ. ಬೆಳಗ್ಗೆಯವರೆಗೆ 4 ಪ್ರಕರಣಗಳು ಮಾತ್ರವೇ ಕಂಡುಬಂದಿದ್ದರೆ ಸಂಜೆಯ ವೇಳೆಗೆ 2 ಪ್ರಕರಣಗಳು ಪತ್ತೆಯಾಗಿ ಒಟ್ಟು 6 ಪ್ರಕರಣಗಳು ಬೆಳಕಿಗೆ ಬಂದಿದೆ. ಇಂದಿನ ಪ್ರಕರಣದಲ್ಲಿ 4 ಪ್ರಕರಣಗಳು ಮೈಸೂರು ಹಾಗೂ 2 ಪ್ರಕರಣ ದ ಕ ಜಿಲ್ಲೆಯಲ್ಲಿ ಕಂಡುಬಂದಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 390 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಇದರ ಜೊತೆಗೆ ಲಾಕ್ಡೌನ್ ಮೇ.3 ರವರೆಗೆ ವಿಸ್ತರಣೆ ಮಾಡಿ ಆದೇಶವನ್ನು ಸರಕಾರ ಮಾಡಿದೆ.
ಕೇರಳದಲ್ಲಿ ಭಾನುವಾರ 2 ಹೊಸ ಪ್ರಕರಣ ಪತ್ತೆಯಾಗಿದೆ. ಕಾಸರಗೋಡು ಹಾಗೂ ಕಣ್ಣೂರಿನಲ್ಲಿ ಭಾನುವಾರ ಪತ್ತೆಯಾದ ಪ್ರಕರಣವಾಗಿದೆ. ಈ ಮೂಲಕ ಕೇರಳದಲ್ಲಿ ಒಟ್ಟು 402 ಕೊರೊನಾ ವೈರಸ್ ಸೋಂಕಿತರು ಕಂಡುಬಂದಿದ್ದಾರೆ. ಕೇರಳದಲ್ಲಿ ಎ.20 ರಿಂದ ಕೆಲವು ಪ್ರದೇಶಗಳಲ್ಲಿ ಲಾಕ್ಡೌನ್ ಸಡಿಲವಾಗಲಿದೆ.
ದೇಶದಾದ್ಯಂತ ಕಳೆದ 24 ಗಂಟೆಯಲ್ಲಿ 1324 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ ಒಟ್ಟು 16,116 ಕ್ಕೆ ಏರಿಕೆಯಾಗಿದೆ. ಭಾನುವಾರ ಒಟ್ಟು 31 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಇದುವರೆಗೆ ಒಟ್ಟು 519 ಮಂದಿ ಮೃತಪಟ್ಟಿದ್ದು ಒಟ್ಟು 2302 ಮಂದಿ ಚೇತರಿಕೆ ಕಂಡುಬಂದಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ.
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…