ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲಾನಿಯಾ ಟ್ರಂಪ್ ಎರಡುದಿನಗಳ ಪ್ರವಾಸ ಹಿನ್ನಲೆಯಲ್ಲಿ ಸೋಮವಾರ ಭಾರತಕ್ಕೆ ಆಗಮಿಸಿದ್ದಾರೆ. ಬೆಳಗ್ಗೆ 11.40ಕ್ಕೆ ಅಹಮದಾಬಾದ್ ಏರ್‌ಪೋರ್ಟ್‌ಗೆ ಆಗಮಿಸಿದ ಬಳಿಕ ಸಬರಮತಿ ಆಶ್ರಮಕ್ಕೆ ತೆರಳಿದರು. ಈ ಸಂದರ್ಭ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಮೆಲಾನಿಯಾ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು. ಇದೇ ವೇಳೆ ಚರಕದ ಮಹತ್ವವನ್ನು ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು.
ರಾತ್ರಿ ದೆಹಲಿಗೆ ಪಯಣ ಬೆಳೆಸಲಿದ್ದಾರೆ. ಮಂಗಳವಾರ ರಾಷ್ಟ್ರಪತಿ ಭವನದಲ್ಲಿ ಟ್ರಂಪ್ ಗೆ ಅದ್ದೂರಿ ಸ್ವಾಗತ ಕಾರ್ಯಕ್ರಮವಿದೆ. ಪ್ರಧಾನಿ ನರೇಂದ್ರ ಮೋದಿ ಜತೆ ದ್ವಿಪಕ್ಷೀಯ ಮಾತುಕತೆ ನಡೆಯಲಿದ್ದು ರಕ್ಷಣೆ ಇಂಧನ ಸೇರಿ ಹಲವು ಕ್ಷೇತ್ರಗಳಲ್ಲಿ ಉಭಯ ದೇಶಗಳ ಮಧ್ಯೆ ಮಹತ್ವದ ಒಪ್ಪಂದಗಳು ಏರ್ಪಡುವ ನಿರೀಕ್ಷೆ ಇದೆ.
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…