ಭಾರತದ ಸಂವಿಧಾನಕ್ಕೆ ಅಪಾಯವಿದೆಯೇ? ಉಪನ್ಯಾಸ ಕಾರ್ಯಕ್ರಮ

July 4, 2019
10:00 AM

ಸುಳ್ಯ: “ಸಂವಿಧಾನದ ಮೂಲ ಆಶಯ ಬದುಕುವ ಹಕ್ಕು. ನಾವು ಪ್ರಜಾಪ್ರಭುತ್ವವನ್ನು ಉಳಿಸಬೇಕು. ಇದರ ಮೂಲ ಸ್ವರೂಪವು ಉಳಿಯಬೇಕು” ಎಂದು ಖ್ಯಾತ ಅರ್ಥ ಶಾಸ್ತ್ರಜ್ಞ, ಸಾಹಿತಿ , ಯಕ್ಷಗಾನ ಕಲಾವಿದ ನೆಹರು ಮೆಮೋರಿಯಲ್ ಪದವಿ ಕಾಲೇಜು ಇಲ್ಲಿನ ನಿವೃತ್ತ ಪ್ರಾಂಶುಪಾಲ ಡಾ. ಪ್ರಭಾಕರ ಶಿಶಿಲ ಹೇಳಿದರು.

ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಕಲಾ ವಿಭಾಗದ ಮಾನವಿಕ ಸಂಘ ದಿಂದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಭಾರತದ ಸಂವಿಧಾನಕ್ಕೆ ಅಪಾಯವಿದೆಯೇ? ಎಂಬ ಉಪನ್ಯಾಸ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು . ಭಾಷೆ, ಸಂಸ್ಕೃತಿ , ಸಾಹಿತ್ಯ, ಹಿರಿಯರ ಸಾಧನೆಗಳನ್ನು ನಾವು ರಕ್ಷಿಸಬೇಕು. ಇಲ್ಲದೇ ಹೋದಲ್ಲಿ ನಮ್ಮ ಸಾಂಸ್ಕೃತಿಕ ವೈಶಿಷ್ಟ್ಯ ನಾಶವಾಗುತ್ತದೆ. ನಾವೆಲ್ಲರೂ ಓದುವುದು , ಜಾಗೃತವಾಗುವುದು ಮತ್ತು ಪ್ರತಿಕ್ರಿಯೆ ವ್ಯಕ್ತ ಪಡಿಸುವುದನ್ನು ರೂಢಿಸಿಕೊಳ್ಳಬೇಕು ಎಂದರು.
ಕಾಲೇಜಿನ  ಪ್ರಾಂಶುಪಾಲೆ  ಹರಿಣಿ ಪುತ್ತೂರಾಯ ಅವರು ಅಧ್ಯಕ್ಷತೆ ವಹಿಸಿದ್ದರು. ಕಲಾ ವಿಭಾಗದ ಉಪನ್ಯಾಸಕಿ ರೇಷ್ಮಾ ಎಂ ಎಂ ಇವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.ವಿದ್ಯಾರ್ಥಿನಿಯರು ಆಶಯ ಗೀತೆ ಹಾಡಿದರು. ಕಲಾ ವಿಭಾಗದ ಉಪನ್ಯಾಸಕಿ ಶ್ರೀಮತಿ ಜಾನಕಿ ಟಿ ವಂದಿಸಿದರು. ವಿದ್ಯಾರ್ಥಿನಿ ಮೇಘನಾ ಎಸ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ
ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ
August 6, 2026
8:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror