ಸುಳ್ಯ: “ಸಂವಿಧಾನದ ಮೂಲ ಆಶಯ ಬದುಕುವ ಹಕ್ಕು. ನಾವು ಪ್ರಜಾಪ್ರಭುತ್ವವನ್ನು ಉಳಿಸಬೇಕು. ಇದರ ಮೂಲ ಸ್ವರೂಪವು ಉಳಿಯಬೇಕು” ಎಂದು ಖ್ಯಾತ ಅರ್ಥ ಶಾಸ್ತ್ರಜ್ಞ, ಸಾಹಿತಿ , ಯಕ್ಷಗಾನ ಕಲಾವಿದ ನೆಹರು ಮೆಮೋರಿಯಲ್ ಪದವಿ ಕಾಲೇಜು ಇಲ್ಲಿನ ನಿವೃತ್ತ ಪ್ರಾಂಶುಪಾಲ ಡಾ. ಪ್ರಭಾಕರ ಶಿಶಿಲ ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಕಲಾ ವಿಭಾಗದ ಮಾನವಿಕ ಸಂಘ ದಿಂದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಭಾರತದ ಸಂವಿಧಾನಕ್ಕೆ ಅಪಾಯವಿದೆಯೇ? ಎಂಬ ಉಪನ್ಯಾಸ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು . ಭಾಷೆ, ಸಂಸ್ಕೃತಿ , ಸಾಹಿತ್ಯ, ಹಿರಿಯರ ಸಾಧನೆಗಳನ್ನು ನಾವು ರಕ್ಷಿಸಬೇಕು. ಇಲ್ಲದೇ ಹೋದಲ್ಲಿ ನಮ್ಮ ಸಾಂಸ್ಕೃತಿಕ ವೈಶಿಷ್ಟ್ಯ ನಾಶವಾಗುತ್ತದೆ. ನಾವೆಲ್ಲರೂ ಓದುವುದು , ಜಾಗೃತವಾಗುವುದು ಮತ್ತು ಪ್ರತಿಕ್ರಿಯೆ ವ್ಯಕ್ತ ಪಡಿಸುವುದನ್ನು ರೂಢಿಸಿಕೊಳ್ಳಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಅವರು ಅಧ್ಯಕ್ಷತೆ ವಹಿಸಿದ್ದರು. ಕಲಾ ವಿಭಾಗದ ಉಪನ್ಯಾಸಕಿ ರೇಷ್ಮಾ ಎಂ ಎಂ ಇವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.ವಿದ್ಯಾರ್ಥಿನಿಯರು ಆಶಯ ಗೀತೆ ಹಾಡಿದರು. ಕಲಾ ವಿಭಾಗದ ಉಪನ್ಯಾಸಕಿ ಶ್ರೀಮತಿ ಜಾನಕಿ ಟಿ ವಂದಿಸಿದರು. ವಿದ್ಯಾರ್ಥಿನಿ ಮೇಘನಾ ಎಸ್ ಕಾರ್ಯಕ್ರಮ ನಿರೂಪಿಸಿದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.