ಹೊಸದಿಲ್ಲಿ: ಭಾರತೀಯ ಮೂಲದ ಅಮೆರಿಕನ್ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಪತ್ನಿ ಎಸ್ತರ್ ಡುಫ್ಲೋ ಮತ್ತು ಮೈಕಲ್ ಕ್ರೆಮರ್ 2019ನೆ ಸಾಲಿನ ನೊಬೆಲ್ ಅರ್ಥಶಾಸ್ತ್ರ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.
ಜಾಗತಿಕ ಬಡತನವನ್ನು ನಿವಾರಿಸುವಲ್ಲಿ ಪ್ರಾಯೋಗಿಕ ಪ್ರಯತ್ನಗಳಿಗಾಗಿ ಈ ಮೂವರನ್ನು ನೊಬೆಲ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸ್ವೀಡಿಶ್ ಅಕಾಡೆಮಿ ತಿಳಿಸಿದೆ.1961 ಫೆಬ್ರವರಿ 21ರಂದು ಅಭಿಜಿತ್ ಕೊಲ್ಕತ್ತಾದಲ್ಲಿ ಜನಿಸಿದರು. 1981ರಲ್ಲಿ ಕೊಲ್ಕತ್ತಾದ ಪ್ರೆಸಿಡೆನ್ಸಿ ಕಾಲೇಜಿ ನಲ್ಲಿ ಅರ್ಥಶಾಸ್ತ್ರದಲ್ಲಿ ಬಿ.ಎಸ್. ಡಿಗ್ರಿ ಪಡೆದರು. ದಿಲ್ಲಿಯ ಜವಾಹರ್ ಲಾಲ್ ನೆಹರೂ ವಿವಿಯಲ್ಲಿ ಅರ್ಥಶಾಸ್ತ್ರದ ಎಂ.ಎ. ಪದವಿ ಗಳಿಸಿದರು.
ಈ ಬಾರಿಯ ಅರ್ಥಶಾಸ್ತ್ರ ನೊಬೆಲ್ ಪುರಸ್ಕಾರವನ್ನು ಹಂಚಿಕೊಂಡಿರುವ ಮೂವರಲ್ಲಿ ಭಾರತೀಯ ಮೂಲದ ಅಮೇರಿಕನ್ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಹಾಗು ಅವರ ಸಹ ಸಂಶೋಧಕಿ ಎಸ್ತರ್ ಡಫ್ಲೊ ಅವರು ಪತಿ ಪತ್ನಿ ಎಂಬುದು ವಿಶೇಷ. ಇವರೊಂದಿಗೆ ನೊಬೆಲ್ ಹಂಚಿಕೊಂಡ ಇವರ ಇನ್ನೋರ್ವ ಸಹಸಂಶೋಧಕ ಮೈಕಲ್ ಕ್ರೆಮರ್.
ಅಭಿಜಿತ್ ಬ್ಯಾನರ್ಜಿ ಅವರು ಅಮೇರಿಕಾದ ಪ್ರತಿಷ್ಠಿತ ಮ್ಯಾಸಚುಸೆಟ್ಸ್ ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅರ್ಥಶಾಸ್ತ್ರದ ಅಂತರ್ ರಾಷ್ಟ್ರೀಯ ಪ್ರಾಧ್ಯಾಪಕ ಹುದ್ದೆಯಲ್ಲಿದ್ದಾರೆ.
ಎಸ್ತರ್ ಡಫ್ಲೊ ಎಂ ಐ ಟಿ ಯಲ್ಲೇ ಪ್ರಾಧ್ಯಾಪಕಿಯಾಗಿದ್ದಾರೆ.
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…
ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು…
ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. …