ಸುಳ್ಯ: ಭಾರತೀಯ ವೈದ್ಯಕೀಯ ಸಂಘದ ಸುಳ್ಯ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಭಾನುವಾರ ಸುಳ್ಯ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಿತು.
ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯ ಅಧ್ಯಕ್ಷ ಡಾ. ಮಧುಸೂದನ ಕರಿಗನೂರು ಪದಗ್ರಹಣ ನೆರವೇರಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಶಾಖೆಯ ಅಧ್ಯಕ್ಷ ಅಣ್ಣಯ್ಯ ಕುಲಾಲ್ ಮುಖ್ಯ ಅತಿಥಿಗಳಾಗಿದ್ದರು. ನೂತನ ಅಧ್ಯಕ್ಷ ಡಾ.ಬಿ.ಎನ್.ಶ್ರೀಕೃಷ್ಣ ನೇತೃತ್ವದ 2019-20ನೇ ಸಾಲಿನ ಪದಾಧಿಕಾರಿಗಳು ಅಧಿಕಾರ ವಹಿಸಿದರು. ನಿರ್ಗಮನ ಅಧ್ಯಕ್ಷೆ ಡಾ.ಗೀತಾ ದೊಪ್ಪ ಅಧಿಕಾರ ಹಸ್ತಾಂತರಿಸಿದರು.
ನೂತನ ಕಾರ್ಯದರ್ಶಿ ಡಾ. ರವಿಶಂಕರ್ ಎಸ್ ಹಾಗು ಖಜಾಂಜಿ ಡಾ. ಗಣೇಶ್.ಕೆ.ಕೆ, ಅವರಿಗೆ ನಿರ್ಗಮನ ಕಾರ್ಯದರ್ಶಿ ಡಾ. ಭರತ್ ಶೆಟ್ಟಿ ಮತ್ತು ಖಜಾಂಜಿ ಡಾ. ಅಮಿತ್ ಕುಮಾರ್ ಅಧಿಕಾರ ಹಸ್ತಾಂತರಿಸಿದರು. ರಾಜ್ಯಾಧ್ಯಕ್ಷ ಡಾ. ಮಧುಸೂದನ ಪ್ರಮಾಣ ವಚನ ಬೋಧಿಸಿದರು. ಡಾ.ಗೀತಾ ದೊಪ್ಪ ಸ್ವಾಗತಿಸಿದರು. ಡಾ. ಲಾಲಿತ್ಯ ಕಾರ್ಯಕ್ರಮ ನಿರೂಪಿಸಿದರು.
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…
ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…
ಪಡಿತರ ಚೀಟಿಗೆ ಆಧಾರ್ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…
ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…
ಎಥೆನಾಲ್ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…