ಮ್ಯಾಂಚೆಸ್ಟರ್: ಭಾರತ ಹಾಗೂ ನ್ಯೂಝಿಲ್ಯಾಂಡ್ ನಡುವೆ ಮಂಗಳವಾರ ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ ಸೆಮಿ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ಪಂದ್ಯವನ್ನು ಮೀಸಲು ದಿನವಾದ ಬುಧವಾರಕ್ಕೆ ಮುಂದೂಡಲಾಗಿದೆ.
ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಾಗ ನ್ಯೂಝಿಲ್ಯಾಂಡ್ 46.1 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 211 ರನ್ ಗಳಿಸಿದೆ. ರಾಸ್ ಟೇಲರ್(ಔಟಾಗದೆ 67, 85 ಎಸೆತ, 3 ಬೌಂಡರಿ, 1 ಸಿಕ್ಸರ್) ಹಾಗೂ ಟಾಮ್ ಲಥಾಮ್(ಔಟಾಗದೆ 3)ಕ್ರೀಸ್ ಕಾಯ್ದುಕೊಂಡಿದ್ದರು. ಕಿವೀಸ್ ಸ್ಪರ್ಧಾತ್ಮಕ ಮೊತ್ತದತ್ತ ಸಾಗುತ್ತಿದ್ದಾಗ ಮಳೆ ಆಗಮಿಸಿ ಪಂದ್ಯ ಸ್ಥಗಿತಗೊಂಡಿದೆ.
ನ್ಯೂಝಿಲ್ಯಾಂಡ್ ಬುಧವಾರ ತನ್ನ ಬ್ಯಾಟಿಂಗ್ ಮುಂದುವರಿಸಿ ಇನ್ನೀಂಗ್ಸ್ ನ ಉಳಿದ 23 ಬಾಲ್ ಆಡಿದ ಬಳಿಕ ಭಾರತ ತನ್ನ ಇನ್ನೀಂಗ್ಸ್ ಆರಂಭಿಸಲಿದೆ. ಬುಧವಾರದ ಪಂದ್ಯದಲ್ಲೂ ಫಲಿತಾಂಶ ಬಾರದಿದ್ದರೆ 10 ತಂಡಗಳಿದ್ದ ಗ್ರೂಪ್ ಹಂತದ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿರುವ ಭಾರತ ಫೈನಲ್‌ಗೆ ತೇರ್ಗಡೆಯಾಗಲಿದೆ.
ಇಲ್ಲಿನ ಎಮಿರೇಟ್ಸ್ ಓಲ್ಡ್ ಟ್ರಾಫೋರ್ಡ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 46.1 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 211 ರನ್ ಗಳಿಸಿ ಬ್ಯಾಟಿಂಗ್ ಮಾಡುವ ವೇಳೆ ಮಳೆಯಿಂದ ಪಂದ್ಯ ಸ್ಥಗಿತಗೊಂಡಿತು.
5 ಗಂಟೆಗಳಾದರೂ ಮಳೆ ನಿಲ್ಲದ ಕಾರಣ, ಐಸಿಸಿ ಹಾಗೂ ವಿಶ್ವಕಪ್ ಆಡಳಿತ ಮಂಡಳಿ ಬುಧವಾರದ ಮೀಸಲು ದಿನಕ್ಕೆ ಪಂದ್ಯವನ್ನು ಮುಂದೂಡಿದೆ. ಬುಧವಾರ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 3.00ಕ್ಕೆ ಪಂದ್ಯ ಆರಂಭವಾಗಲಿದೆ. ರಾಸ್ ಟೇಲರ್ (67*) ಹಾಗೂ ಟಾಮ್ ಲಾಥಮ್ (3*)ಬ್ಯಾಟಿಂಗ್ ಮುಂದುವರಿಸುವರು.
ಭಾರತದ ಪರ ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯಜುವೇಂದ್ರ ಚಾಹಲ್ ಹಾಗೂ ಭುವನೇಶ್ವರ್ ಕುಮಾರ್ ತಲಾ ಒಂದು ವಿಕೆಟ್ ಪಡೆದಿದ್ದಾರೆ
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…
ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳು ಬಾಕಿ…
ಭಾರತದ ಸ್ವಚ್ಛತಾ ಅಭಿಯಾನಕ್ಕೆ ವೇಗ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.…