ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿಯನ್ನು ಭಾರತ-ಪಾಕಿಸ್ತಾನ ಗಡಿಕಾಯುವ ಸೈನಿಕರೊಂದಿಗೆ ಆಚರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಕಾವಲು ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿಗಳು ಶಾಂತಿ ನೆಲೆಸಲು ಗಡಿ ಕಾವಲುಪಡೆ ಸದಾ ಜಾಗೃತವಾಗಿರಲು ಪ್ರಧಾನಿ ಕಳಕಳಿಯ ಮನವಿ ಮಾಡಿದ್ದಾರೆ. 70 ನೇ ವಿಧಿಯನ್ನು ರದ್ದುಪಡಿಸಿದ ನಂತರದಲ್ಲಿ ಪ್ರಧಾನಿಗಳ ಮೊದಲ ಕಾಶ್ಮೀರ ಭೇಟಿ ಇದಾಗಿದೆ. ಪ್ರಧಾನಿಗಳ ಕಾರ್ಯಕ್ರಮ ತೀರಾ ಗೌಪ್ಯವಾಗಿ ಇಡಲಾಗಿತ್ತು.
ಪ್ರಧಾನಿಗಳ ಭೇಟಿ ನಂತರ ಅನೇಕ ಸೈನಿಕರು ಸಂತಸ ವ್ಯಕ್ತಪಡಿಸಿದ್ದಾರೆ. ಗಡಿಭಾಗದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಿದ್ದಕ್ಕಾಗಿ ಪ್ರಧಾನ ಮಂತ್ರಿಗಳನ್ನು ಶ್ಲಾಘಿಸಿದ ಸೈನಿಕರು ದೇಶದ ಗಡಿಗಳನ್ನು ಭದ್ರಪಡಿಸಲು ದಿನದ ಎಲ್ಲಾ ಸಮಯ ಕೆಲಸ ಮಾಡುತ್ತಿರುವ ನಮ್ಮಂತಹಾ ಸೈನಿಕರಿಗೆ ಮನೋಸ್ಥೈರ್ಯ ತುಂಬುವಂತಹ ಸೂಚಕ ಈ ಭೇಟಿಯಾಗಿದೆ ಎಂದಿದ್ದಾರೆ.
ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…
ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…
ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…
ರೈಲ್ವೆ ಇಲಾಖೆ ಪ್ರಯಾಗ್ರಾಜ್ನಿಂದ 350 ಕ್ಕೂ ಹೆಚ್ಚು ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ಮ್ಯಾನ್ಮಾರ್ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ…
ಅಡಿಕೆ ವ್ಯಾಪಾರ ನಡೆಸಿ ಹಣ ಕೊಡದೆ ವಂಚನೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಈ…