ಭಾರೀ ಗಾಳಿ ಮಳೆ : ಬಳ್ಪದ ಬಳಿ ಚಲಿಸುತ್ತಿದ್ದ ಸ್ಕೂಟರ್ ಹಾಗೂ ಕಾರಿನ ಮೇಲೆ ಮರ ಬಿದ್ದು ಜಖಂ : ಕಾರು ಚಾಲಕನಿಗೆ ಗಂಭೀರ ಗಾಯ

November 6, 2019
10:12 PM

ಬಳ್ಪ: ಬುಧವಾರ ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಸುಬ್ರಹ್ಮಣ್ಯ – ಪಂಜ ರಸ್ತೆಯ  ಬಳ್ಪ ಬಳಿಯ ಎಣ್ಣೆಮಜಲು ಕ್ರಾಸ್ ಬಳಿ ಚಲಿಸುತ್ತಿದ್ದ ಸ್ಕೂಟರ್ ಹಾಗೂ ಕಾರಿನ ಮೇಲೆ ಮರ ಬಿದ್ದು ಕಾರು ಚಾಲಕ ಗಣೇಶ್ ಎಂಬವರು  ಗಂಭೀರವಾಗಿ ಗಾಯಗೊಂಡಿದ್ದಾರೆ.

ಬುಧವಾರ ಸಂಜೆ ಭಾರೀ ಗುಡುಗು ಸಹಿತ ಮಳೆಯಾಗಿದೆ. ಸುಮಾರು 6 ಗಂಟೆಯಿಂದ ಆರಂಭವಾದ ಭಾರಿ ಸಿಡಿಲು,ಗುಡುಗು,ಗಾಳಿ ಸಹಿತವಾದ ಮಳೆ ಬಳ್ಪ, ಗುತ್ತಿಗಾರು, ಏನೇಕಲ್ಲು  ಆಸುಪಾಸಿನಲ್ಲಿ  ಆರಂಭವಾಗಿತ್ತು.  ಈ ಸಂದರ್ಭ ಎಣ್ಣೆಮಜಲು ಕ್ರಾಸ್ ಬಳಿ ಸುಬ್ರಹ್ಮಣ್ಯ ಕಡೆಗೆ ಸಂಚರಿಸುತ್ತಿದ್ದ ಬಡೆಕ್ಕೋಡಿಯ ಜನಾರ್ಧನ ಎಂಬವರ ಕಾರಿನ ಮೇಲೆ ಹಾಗೂ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಕೂಟರ್ ಮೇಲೆ ಮರ ಉರುಳಿ ಬಿದ್ದಿದೆ. ಈ ಸಂದರ್ಭ ಕಾರು ಚಲಾಯಿಸುತ್ತಿದ್ದ ಗಣೇಶ್ ಎಂಬವರು ಗಂಭೀರ ಗಾಯಗೊಂಡರು. ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ.

ಬಡೆಕ್ಕೋಡಿಯಿಂದ ಸುಬ್ರಹ್ಮಣ್ಯದ ಬಳಿಯ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಜನಾರ್ಧನ ಅವರ ಕಾರನ್ನು ಗಣೇಶ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದರು.

ಸುಗಮ ವಾಹನ ಸಂಚಾರಕ್ಕೆ ಅರಣ್ಯ ಇಲಾಖಾ ಸಿಬಂದಿಗಳು ವ್ಯವಸ್ಥೆ ಮಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್
June 8, 2026
9:11 AM
by: ದ ರೂರಲ್ ಮಿರರ್.ಕಾಂ
ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!
June 7, 2026
9:17 PM
by: ದ ರೂರಲ್ ಮಿರರ್.ಕಾಂ
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?
June 7, 2026
7:32 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
June 7, 2026
1:56 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror