ಮಂಗಳೂರು/ಸುಳ್ಯ: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಮುಂದಿನ 48 ಗಂಟೆಗಳಲ್ಲಿ ಮತ್ತೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಸರ್ವ ಸನ್ನದ್ಧವಾಗಿರಬೇಕು ಎಂದು ಸೂಚನೆ ನೀಡಿದೆ. ಇಲಾಖೆ ಮಾತ್ರವಲ್ಲ ಸಾರ್ವಜನಿಕರದ್ದೂ ಇಲ್ಲಿ ಮುಂಜಾಗ್ರತೆಯ ಬಹುಪಾಲು ಜವಾಬ್ದಾರಿ ಇದೆ.
ಜಿಲ್ಲೆಯ ಪದವಿಯವರೆಗಿನ ಎಲ್ಲಾ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ನೀಡುವುದು , ನೀರು ಅಥವಾ ತಗ್ಗು ಪ್ರದೇಶಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸುವುದು, ಮೀನುಗಾರರು 3 ದಿನಗಳ ಕಾಲ ಕಡ್ಡಾಯವಾಗಿ ಸಮುದ್ರಕ್ಕೆ ಇಳಿಯುವುದು ನಿಷೇಧ, ಸಾರ್ವಜನಿಕ ದೂರುಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸುವುದು , ಪ್ರವಾಸಿಗರು ಹಾಗೂ ಸಾರ್ವಜನಿಕರು ನೀರಿಗೆ ಇಳಿಯದಂತೆ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.
ಯಾವುದಾದರೂ ಪ್ರಾಕೃತಿಕ ವಿಕೋಪ ಸಂಭವಿಸಿದಾಗ ತುರ್ತು ಸಂಪರ್ಕ ಸಂಖ್ಯೆಗೆ ಸಂಪರ್ಕಿಸಲು ಇದೇ ವೇಳೆ ಕೋರಲಾಗಿದೆ. 24 ಗಂಟೆಯೂ ಚಾಲೂ ಇರುವ ಕಂಟ್ರೋಲ್ ರೂಂ 1077 ಗೆ ಕರೆ ಮಾಡಬಹುದು.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…