ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ 20.07.2019 ರಂದು ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ.
ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ ಅಲ್ಲದೆ ಮುಂಗಾರು ಮಳೆ ಮತ್ತಷ್ಟು ಬಿರುಸಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ.
ದಿನಾಂಕ 20.07.2019 ರಿಂದ 22.07.2019 ರವರೆಗೆ ಜಿಲ್ಲೆಯಲ್ಲಿ ಪ್ರತಿದಿನ 200 ಮಿಲಿಮೀಟರ್ ಮಳೆ ಬೀಳುವ ಸಾಧ್ಯತೆ ಇದ್ದು, ಕೇಂದ್ರ ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ದಿನಾಂಕ 20 ರಿಂದ 22 ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ನೀರು ತುಂಬುವ ತಗ್ಗು ಪ್ರದೇಶ, ಕೆರೆ, ಸಮುದ್ರಕ್ಕೆ ಸಾರ್ವಜನಿಕರು ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel