ಪುತ್ತೂರು: ಸೋಮವಾರ ಹಾಗೂ ಮಂಗಳವಾರ ಕೂಡಾ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಪುತ್ತೂರು, ಕಡಬ, ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಕಾಲೇಜುಗಳಿಗೆ ಒಂದು ದಿನದ ರಜೆ ನೀಡುವಂತೆ ಪುತ್ತೂರು ಸಹಾಯಕ ಕಮೀಶನರ್ ಎಚ್.ಕೆ.ಕೃಷ್ಣಮೂರ್ತಿ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಕಾಲೇ ಜುಗಳಿಗೆ ರಜೆ ನೀಡಲಾಗಿದ್ದು ಪದವಿ ಹಾಗೂ ನಂತರದ ತರಗತಿಗಳು ಎಂದಿನಂತೆ ನಡೆಯಲಿದೆ ಎಂದು ಸಹಾಯಕ ಕಮೀಶನರ್ ಅವರ ಪ್ರಕಟಣೆ ತಿಳಿಸಿದೆ.
ಸೋಮವಾರ ಬೆಳಗ್ಗಿನಿಂದಲೇ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ವಿವಿದೆಡೆ ರಸ್ತೆಯಲ್ಲೇ ನೀರು ಹರಿಯುತ್ತಿದೆ. ಗ್ರಾಮೀಣ ಭಾಗದ ಹೊಳೆ ಹಾಗೂ ತೋಡುಗಳಲ್ಲಿ ಈ ವರ್ಷ ಮೊದಲ ಬಾರಿಗೆ ನೀರು ತುಂಬಿ ಹರಿದಿದೆ. ಈಗಲೂ ಉತ್ತಮ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ಪ್ರಕಾರ ಮಂಗಳವಾರವೂ ಉತ್ತಮ ಮಳೆಯಾಗಲಿದೆ.
ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ…
ಖಾದಿ ದೇಶದ ಅಸ್ಮಿತೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಉತ್ತೇಜನ-ಪ್ರೋತ್ಸಾಹ ಅತ್ಯಗತ್ಯವಾಗಿದೆ ಎಂದು…
ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಯವರ ಆದೇಶದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು…
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…