ಸುಬ್ರಹ್ಮಣ್ಯ:ಘಟ್ಟ ಪ್ರದೇಶದಲ್ಲಿ ಇಂದು ಕೂಡಾ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಕುಮಾರಧಾರಾ ಮತ್ತು ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದ್ದು ,ಜಿಲ್ಲೆಯ ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ.
Advertisement
ಸುಬ್ರಹ್ಮಣ್ಯ ಕುಲ್ಕುಂದ ದ ಪರಿಶಿಷ್ಟ ಕಾಲನಿಗೆ ಕುಮಾರಧಾರಾ ನದಿ ನೀರು ನುಗ್ಗಿದ್ದು ನಾಲ್ಕು ಮನೆಗಳಿಗೆ ತೊಂದರೆಯಾಗಿದೆ. ಒಂದು ಮನೆ ಜಲಾವೃತವಾಗಿದ್ದು, ಇನ್ನುಳಿದ ಮನೆಗಳೂ ಜಲಾವೃತವಾಗುವ ಲಕ್ಷಣಗಳು ಗೋಚರಿಸಲಾರಂಭಿಸಿದೆ. ಮನೆಯವರು ಮುಂಜಾಗ್ರತಾ ಕ್ರಮವಾಗಿ ಬೇರೆಡೆಗೆ ಸ್ಥಳಾಂತರಗೊಂಡಿದ್ದು, ಸಂತ್ರಸ್ತರಿಗೆ ಗಂಜಿ ಕೇಂದ್ರದ ವ್ಯವಸ್ಥೆ ಇನ್ನಷ್ಟೇ ಆಗಬೇಕಿದೆ.
Advertisement
ಕುಮಾರಧಾರಾ ನದಿ ನೀರು ಸುಬ್ರಹ್ಮಣ್ಯ ಸ್ನಾನಘಟ್ಟದ ಬಳಿ ಸುಬ್ರಹ್ಮಣ್ಯ-ಮಂಜೇಶ್ಚರ ರಾಜ್ಯ ಹೆದ್ದಾರಿಗು ನುಗ್ಗಿದ್ದು, ಈ ರಸ್ತೆಯಲ್ಲಿ ವಾಹನ ಸಂಚಾರ ನಿಶೇಧಿಸಲಾಗಿದೆ. ಅಲ್ಲದೆ ಸುಳ್ಯ-ಸುಬ್ರಹ್ಮಣ್ಯ-ಸಕಲೇಶಪುರ ಸಂಪರ್ಕಿಸುವ ಬಿಸಿಲೆ ಘಾಟ್ ರಸ್ತೆಯಲ್ಲೂ ಮರ ಹಾಗೂ ಗುಡ್ಡ ಕುಸಿದ ಪರಿಣಾಮ ಬಿಸಿಲೆ ಘಾಟ್ ರಸ್ತೆಯಲ್ಲೂ ಸಂಚಾರಕ್ಕೆ ತೊಡಕಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement