ಭೂಗತ ಪಾತಕಿ ರವಿ ಪೂಜಾರಿಗೆ 14 ದಿನಗಳ ಪೊಲೀಸ್ ಕಸ್ಟಡಿ

February 24, 2020
2:20 PM

ಬೆಂಗಳೂರು:ಭೂಗತ ಪಾತಕಿ ರವಿ ಪೂಜಾರಿಯನ್ನು ಕೊನೆಗೂ ಬಂಧಿಸಿದ ಬೆಂಗಳೂರು  ಪೊಲೀಸರು ಸೋಮವಾರ  1ನೇ ಎಸಿಎಂಎಂ  ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆಯ ಹಿನ್ನೆಲೆಯಲ್ಲಿ  ಪೊಲೀಸರ ಬೇಡಿಕೆಯಂತೆ ನ್ಯಾಯಾಲಯವು 14 ದಿನಗಳ ಪೊಲೀಸ್​ ಕಸ್ಟಡಿಗೆ ಒಪ್ಪಿಸಿದೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ  ಭೂಗತ ಪಾತಕಿ ರವಿ ಪೂಜಾರಿಯನ್ನು ಭಾನುವಾರ ತಡರಾತ್ರಿ ಕರ್ನಾಟಕ ಪೊಲೀಸರು  ದಕ್ಷಿಣ ಆಫ್ರಿಕಾದ ಸೆನೆಗಲ್​ನಿಂದ ಬೆಂಗಳೂರಿಗೆ ಕರೆತಂದಿದ್ದರು. ಸೋಮವಾರ  ಆತನನ್ನು 1ನೇ ಎಸಿಎಂಎಂ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದರು. ಈಗ  ಸಿಸಿಬಿ ಪೊಲೀಸರು ಭೂಗತ ಪಾತಕಿ ರವಿ ಪೂಜಾರಿಯನ್ನು ವಶಕ್ಕೆ ಪಡೆದಿದ್ದಾರೆ.

ರವಿ ಪೂಜಾರಿ ವಿರುದ್ಧ 90ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿ 39 ಪ್ರಕರಣಗಳು , ಮಂಗಳೂರಿನಲ್ಲಿ 36, ಉಡುಪಿಯಲ್ಲಿ 11 ಸೇರಿದಂತೆ ಮೈಸೂರು, ಹುಬ್ಬಳ್ಳಿ, ಧಾರವಾಡ, ಕೋಲಾರದಲ್ಲೂ ಪ್ರಕರಣಗಳಿವೆ. 15 ವರ್ಷಗಳಿಂದ ರವಿ ಪೂಜಾರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಚೋಟಾ ರಾಜನ್‌ ಸಹಚರನಾಗಿದ್ದ ರವಿ ಪೂಜಾರಿ ವಿದೇಶದಲ್ಲಿ ತಲೆಮರೆಸಿಕೊಂಡು ಹಲವಾರು ಪಾತಕ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದ. ಕೊಲೆ, ಕೊಲೆಯತ್ನ, ಬೆದರಿಕೆ, ಹಫ್ತಾ ವಸೂಲಿ ಸೇರಿದಂತೆ ಹಲವಾರು ಪ್ರಕರಣಗಳು ಈತನ ವಿರುದ್ಧವಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ
ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror