ಬೆಂಗಳೂರು:ಭೂಗತ ಪಾತಕಿ ರವಿ ಪೂಜಾರಿಯನ್ನು ಕೊನೆಗೂ ಬಂಧಿಸಿದ ಬೆಂಗಳೂರು ಪೊಲೀಸರು ಸೋಮವಾರ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆಯ ಹಿನ್ನೆಲೆಯಲ್ಲಿ ಪೊಲೀಸರ ಬೇಡಿಕೆಯಂತೆ ನ್ಯಾಯಾಲಯವು 14 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಭೂಗತ ಪಾತಕಿ ರವಿ ಪೂಜಾರಿಯನ್ನು ಭಾನುವಾರ ತಡರಾತ್ರಿ ಕರ್ನಾಟಕ ಪೊಲೀಸರು ದಕ್ಷಿಣ ಆಫ್ರಿಕಾದ ಸೆನೆಗಲ್ನಿಂದ ಬೆಂಗಳೂರಿಗೆ ಕರೆತಂದಿದ್ದರು. ಸೋಮವಾರ ಆತನನ್ನು 1ನೇ ಎಸಿಎಂಎಂ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದರು. ಈಗ ಸಿಸಿಬಿ ಪೊಲೀಸರು ಭೂಗತ ಪಾತಕಿ ರವಿ ಪೂಜಾರಿಯನ್ನು ವಶಕ್ಕೆ ಪಡೆದಿದ್ದಾರೆ.
ರವಿ ಪೂಜಾರಿ ವಿರುದ್ಧ 90ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿ 39 ಪ್ರಕರಣಗಳು , ಮಂಗಳೂರಿನಲ್ಲಿ 36, ಉಡುಪಿಯಲ್ಲಿ 11 ಸೇರಿದಂತೆ ಮೈಸೂರು, ಹುಬ್ಬಳ್ಳಿ, ಧಾರವಾಡ, ಕೋಲಾರದಲ್ಲೂ ಪ್ರಕರಣಗಳಿವೆ. 15 ವರ್ಷಗಳಿಂದ ರವಿ ಪೂಜಾರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಚೋಟಾ ರಾಜನ್ ಸಹಚರನಾಗಿದ್ದ ರವಿ ಪೂಜಾರಿ ವಿದೇಶದಲ್ಲಿ ತಲೆಮರೆಸಿಕೊಂಡು ಹಲವಾರು ಪಾತಕ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದ. ಕೊಲೆ, ಕೊಲೆಯತ್ನ, ಬೆದರಿಕೆ, ಹಫ್ತಾ ವಸೂಲಿ ಸೇರಿದಂತೆ ಹಲವಾರು ಪ್ರಕರಣಗಳು ಈತನ ವಿರುದ್ಧವಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…