Advertisement
ಸುದ್ದಿಗಳು

ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮಕ್ಕೆ ಐವನ್ ಆದೇಶ

Share

ಸುಳ್ಯ: ಲಂಚ ಪಡೆಯುತ್ತಿದ್ದ ಸುಳ್ಯದ ಉಪನೋಂದಣಾಧಿಕಾರಿ ಕಚೇರಿಯ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಆದೇಶ ನೀಡಿದ್ದಾರೆ.

ಸುಳ್ಯ ತಾಲೂಕು ಕಚೇರಿಯಲ್ಲಿ ನಡೆದ ಕಂದಾಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ ವಿಷಯ ಪ್ರಸ್ತಾಪಿಸಿದರು. ಅಧಿಕಾರಿ ಲಂಚ ಪಡೆಯುತ್ತಿರುವ ವೀಡಿಯೋ ಮಾಧ್ಯಮಗಳ ಮೂಲಕ ಹೊರ ಬಂದಿದೆ ಮತ್ತು ಸಾಮಾಜಿಕ ಜಾಲತಾಣದ ಮೂಲಕ ವೈರಲ್ ಆಗಿದೆ. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಸರಕಾರಕ್ಕೆ ಕೆಟ್ಟ ಹೆಸರು ತರುತ್ತಿದೆ ಎಂದರು. ಇದಕ್ಕೆ ಗರಂ ಆದ ಐವನ್ ಡಿಸೋಜ ಈ ರೀತಿಯ ಅಧಿಕಾರಿಗಳನ್ನು ಸಹಿಸಲು ಸಾಧ್ಯವಿಲ್ಲ. ಇದರ ವಿರುದ್ಧ ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಸಹಾಯಕ ಕಮೀಷನರ್ ರಿಗೆ ಆದೇಶ ನೀಡಿದರು.

ಕ್ರಮ ಕೈಗೊಳ್ಳಲಾಗಿದ್ದು ಕೂಡಲೇ ಕ್ರಮ ಆಗಲಿದೆ ಎಂದು ಸಹಾಯಕ ಕಮೀಶನರ್ ಹೆಚ್.‌ಕೆ.ಕೃಷ್ಣಮೂರ್ತಿ ಹೇಳಿದರು. ಇಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಜಿಲ್ಲಾಧಿಕಾರಿಗೆ ತಿಳಿಸಿದ್ದಾಗಿ ಶಾಸಕ ಅಂಗಾರ ಸಭೆಯಲ್ಲಿ ಹೇಳಿದರು. ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒಕ್ಕೊರಲ ಬೇಡಿಕೆ ಕೇಳಿ ಬಂತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

9 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

10 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

17 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

23 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

23 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago