ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ಮಂಗಗಳು ಸಾವನ್ನಪ್ಪಿದರೆ ಶೀಘ್ರವಾಗಿ ವರದಿ ನೀಡಿ ಎಂದು ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಸೆಲ್ವಮಣಿ ಆರ್ ಹೇಳಿದರು.
ಜಿಲ್ಲಾ ಪಂಚಾಯತ್ ಕಾನ್ಫೆರೆನ್ಸ್ ಹಾಲ್‍ನಲ್ಲಿ ನಡೆದ ಮಂಗನಕಾಯಿಲೆ (ಕ್ಯಾಸನೂರು ಕಾಡಿನ ಕಾಯಿಲೆ-ಕೆ.ಫ್.ಡಿ) ಮುಂಜಾಗ್ರತಾ ಹಾಗೂ ನಿಯಂತ್ರಣ ಕ್ರಮಗಳ ಕುರಿತು ದ.ಕ. ಜಿಲ್ಲೆಯ ಅಂತರ್ ಇಲಾಖಾ ಸಮನ್ವಯ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಮಂಗನ ಕಾಯಿಲೆಗೆ ಸಂಬಂಧಪಟ್ಟಂತೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಕ್ಕೆ ಬೇಕಾದ ಔಷಧಿಗಳನ್ನು ದಾಸ್ತಾನು ಮಾಡಿ ಇಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಸಭೆಯನ್ನು ಏರ್ಪಡಿಸಿ ಈ ರೋಗದ ಕುರಿತು ಅರಿವು ಮೂಡಿಸಿ ಜೊತೆಗೆ ತಾಲೂಕು ಮಟ್ಟದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ರಾವ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ನವೀನ್ ಚಂದ್ರ ಕುಲಾಲ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಸಿಕಂದರ್ ಪಾಷಾ, ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಅಧೀಕ್ಷಕರು ಡಾ. ಜೆಸಿಂತ್ ಹಾಗೂ ಇನ್ನಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿರಿದ್ದರು.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490