ಸುಳ್ಯ: ಮಂಗಳೂರಿನಲ್ಲಿ ಕಾಂಗ್ರೆಸ್ ವತಿಯಿಂದ ಅ.2 ರಂದು ಮಹಾತ್ಮಗಾಂಧಿ 150 ನೇ ಜಯಂತಿ ಅಂಗವಾಗಿ ಗಾಂಧಿ ನಡಿಗೆ ಕಾರ್ಯಕ್ರಮ ನಡೆಯಲಿದೆ ಇದಕ್ಕೆ ಸುಳ್ಯದಿಂದ 500 ಮಂದಿ ಭಾಗವಹಿಸುವರು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಹೇಳಿದರು.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗಾಂಧಿನಡಿಗೆ ಮಂಗಳೂರಿನ ಮಂಗಳ ಸ್ಟೇಡಿಯಂ ನಿಂದ ಪ್ರಾರಂಭವಾಗಿ ಟೌನ್ ಹಾಲ್ ವರೆಗೆ ಸಾಗಲಿದೆ. ವಿಶೇಷ ವಾಗಿ ಎಲ್ಲರೂ ಶ್ವೇತ ವಸ್ತ್ರ ಧರಿಸಿ ನಡಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಳ್ಯದಿಂದ ಸುಮಾರು 500 ಜನ ಭಾಗವಹಿಸುವ ನಿರೀಕ್ಷೆ ಮಾಡಲಾಗಿದೆ ಎಂದರು. ಈ ಬಗ್ಗೆ ಚರ್ಚಿಸಲು ಸೆ. 23 ರಂದು ಪೂರ್ವಭಾವಿ ನಡೆಯಲಿದ್ದು ಎಐಸಿಸಿ ಕಾರ್ಯದರ್ಶಿ ಪಿ ಸಿ ವಿಷ್ಣುನಾಥ್ , ಮಾಜಿ ಸಚಿವ ರಮಾನಾಥ ರೈ , ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರಾದ ಸುಧೀರ್ ರೈ, ಸತ್ಯಕುಮಾರ್ ಆಡಿಂಜ, ಮಾಧ್ಯಮ ಪ್ರತಿನಿಧಿ ಭವಾನಿಶಂಕರ ಕಲ್ಮಡ್ಕ, ವಕ್ತಾರ ನಂದರಾಜ್ ಸಂಕೇಶ ಉಪಸ್ಥಿತರಿದ್ದರು
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?