ಮಂಗಳೂರು: ಕೊರೊನಾ ವೈರಸ್ ಸೋಂಕು ಮಂಗಳೂರಿನಲ್ಲಿ ಮತ್ತೆ 4 ಮಂದಿಯಲ್ಲಿ ಪತ್ತೆಯಾಗಿದ್ದು, ಒಟ್ಟು 5 ಮಂದಿಯಲ್ಲಿ ಕೊರೊನಾ ವೈರಸ್ ಜಿಲ್ಲೆಯಲ್ಲಿ ಪತ್ತೆಯಾಗಿದೆ. ರಾಜ್ಯದಲ್ಲಿ ಇಂದು ಒಂದೇ ದಿನ 6 ಪ್ರಕರಣ ಪತ್ತೆಯಾಗಿದೆ. ಅದರಲ್ಲಿ 4 ಪ್ರಕರಣ ಮಂಗಳೂರಿನಲ್ಲಿ ಪತ್ತೆಯಾಗಿದೆ. ಇಂದು ಪತ್ತೆಯಾದ ಪ್ರಕರಣದಲ್ಲಿ ನಾಲ್ವರು ಕೇರಳ ಮೂಲದವರು ಎಂದು ತಿಳಿದುಬಂದಿದೆ. ಮೂವರು ದುಬೈನಿಂದ ಬಂದಿದ್ದು, ಒಬ್ಬರು ಸೌದಿಯಿಂದ ಬಂದವರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 40 ಪ್ರಕರಣ ಪತ್ತೆಯಾದರೆ ದೇಶದಲ್ಲಿ ಒಟ್ಟು 519 ಕೊರೊನಾ ವೈರಸ್ ಸೋಂಕಾದ ಪ್ರಕರಣ ಪತ್ತೆಯಾಗಿದೆ. ದೇಶದಲ್ಲಿ ಒಟ್ಟು 10 ಮಂದಿ ಮೃತಪಟ್ಟಿದ್ದಾರೆ.
32 ವರ್ಷದ ವ್ಯಕ್ತಿ ಕಾಸರಗೋಡು ಮೂಲದವರಾಗಿದ್ದು, ಸ್ಪೈಸ್ ಜೆಟ್ ಮೂಲಕ ದುಬೈನಿಂದ ಮಾರ್ಚ್ 20ರಂದು ಮಂಗಳೂರಿಗೆ ಬಂದಿದ್ದರು. 42 ವರ್ಷದ ವ್ಯಕ್ತಿ ಮಾರ್ಚ್ 19ಕ್ಕೆ ಮಂಗಳೂರಿಗೆ ಬಂದಿದ್ದರು. ಮೂವರನ್ನು ನಗರದ ವೆನ್ ಲಾಕ್ ಆಸ್ಪತ್ರೆಯಲ್ಲಿ ಹಾಗೂ ಒಬ್ಬರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊರೊನಾ ಸೋಂಕಿನ ಹರಡುವಿಕೆಯನ್ನು ತಡೆಯಲು ಜಿಲ್ಲಾಧಿಕಾರಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ಮತ್ತು ಸ್ಪೈಸ್ ಜೆಟ್ ನಲ್ಲಿ ಬಂದಿದ್ದವರನ್ನು ತಪಾಸಣೆಗೆ ಒಳಪಡಿಸಿದ್ದರು. ಇದೀಗ ಈ ನಾಲ್ವರಲ್ಲಿ ಕೊರೊನಾ ಸೋಂಕು ಇರುವುದು ತಿಳಿದುಬಂದಿದೆ. ಮಾರ್ಚ್ 22ರಂದು ಕೊರೊನಾ ಪಾಸಿಟಿವ್ ಬಂದಿದ್ದ ವ್ಯಕ್ತಿ ಪಯಣಿಸಿದ್ದ ವಿಮಾನದಲ್ಲೇ ಈ ನಾಲ್ವರು ಪಯಣಿಸಿದ್ದರು ಎಂಬುದು ತಿಳಿದುಬಂದಿದೆ.
ದೇಶದಲ್ಲಿ ಮಹಾರಾಷ್ಟ್ರದಲ್ಲಿ ಇದುವರೆಗೆ 101 ಪ್ರಕರಣ ಹಾಗೂ ಕೇರಳದಲ್ಲಿ95 ಪ್ರಕರಣ ಪತ್ತೆಯಾಗಿದ್ದು, ಕರ್ನಾಟಕ 3 ನೇ ಸ್ಥಾನದಲ್ಲಿದೆ. ಒಟ್ಟಾರೆ 35 ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಹೊರಬಂದಿದ್ದಾರೆ.
ಬೆಂಗಳೂರಿನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ಈವರೆಗೂ 14, 910 ಮಂದಿಯನ್ನು ಇರಿಸಲಾಗಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…