ಮಂಗಳೂರು: ಋಣ ಮುಕ್ತ ಅನುಷ್ಠಾನ ಸಮಿತಿ ದ.ಕ ಜಿಲ್ಲಾ ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ಮತ್ತು ದಲಿತ ಸಂಘಟನೆಗಳ ಸಹಯೋಗದಲ್ಲಿ ಕಿರು ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಫೈನಾನ್ಸ್‌ಗಳ ಧೋರಣೆಯನ್ನು ಖಂಡಿಸಿ, ಬಡ ಮಹಿಳೆಯರು ಪಡೆದ ಸಾಲವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಸಾಲಗಾರ ಸದಸ್ಯರ ಬೃಹತ್ ಪ್ರತಿಭಟನಾ ಸಮಾವೇಶ ಮಂಗಳೂರು ನೆಹರು ಮೈದಾನದಲ್ಲಿ ನ.28 ರಂದು ನಡೆಯಿತು.
ಸಿಪಿಐಎಂ ಮುಖಂಡ ಬಿ.ಎಂ.ಭಟ್ , ಋಣ ಮುಕ್ತ ಖಾಯ್ದೆ ಅನುಸ್ಠಾನ ಸಮಿತಿಯ ಅಧ್ಯಕ್ಷ ಎಂ.ಬಿ. ಸದಾಶಿವ, ಸಮಿತಿಯ ಮುಖಂಡ ಅಶೋಕ್ ಎಡಮಲೆ ಮತ್ತಿತರರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಮಾವೇಶಕ್ಕೆ ದ.ಕ ಜಿಲ್ಲೆಯ ನಾನಾ ಭಾಗಗಳಿಂದ ಸಾವಿರಾರು ಮಂದಿ ಭಾಗವಹಿಸಿದರು. ಸುಳ್ಯ ತಾಲೂಕಿನಿಂದ ಸಾವಿರಕ್ಕೂ ಮಿಕ್ಕಿ ಜನ ಭಾಗವಹಿಸಿದರು.
ಸಮಿತಿಯ ಸಂಚಾಲಕ ಹಸೈನಾರ್ ಜಯನಗರ , ಡಿ.ಎಂ. ಶಾರೀಕ್ ಹಾಗೂ ವಿವಿಧ ತಾಲೂಕುಗಳ ಸಮಿತಿ ಅಧ್ಯಕ್ಷರುಗಳು ಹಾಗೂ ಸಂಚಾಲಕರು ಭಾಗವಹಿಸಿದ್ದರು. ಬಳಿಕ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಮಂದಿಯ ಸಹಿ ಸಂಗ್ರಹ ಮಾಡಿ ಋಣ ಮುಕ್ತ ಖಾಯಿದೆ ಅಡಿಯಲ್ಲಿ ಸೇರ್ಪಡೆ ಮಾಡಿ ಕಿರು ಹಣಕಾಸು ಸಂಸ್ಥೆಗಳ ಮತ್ತು ಮೈಕ್ರೋಫೈನಾನ್ಸ್ ಗಳಿಂದ ಬಡ ಮಹಿಳೆಯರು ಪಡೆದಿರುವ ಸಾಲವನ್ನು ಮನ್ನಾ ಮಾಡಬೇಕೆಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…