ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ ಸಜೀವ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ನಗರದಲ್ಲಿ ಹೈ ಎಲರ್ಟ್ ಕಾರ್ಯಾಚರಣೆ ನಡೆಯುತ್ತಿದೆ. ಇದೀಗ ಬಾಂಬ್ ನಿಷ್ಕ್ರಿಯ ತಂಡ ಆಗಮಿಸಿದ್ದು ಯೋಧ ಗಂಗಯ್ಯ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ ತೊಡಗಿದೆ. ಈಗ ರೈಲು ನಿಲ್ದಾಣ ಸೇರಿದಂತೆ ಮಂಗಳೂರು ನಗರದ ವಿವಿದೆಡೆ ಭದ್ರತೆ ಕೈಗೊಳ್ಳಲಾಗಿದೆ.
ಬೆಳಗ್ಗೆ ಸುಮಾರು 10 ಗಂಟೆಗೆ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಬ್ಯಾಗ್ ಹಾಗೂ ಲಾಪ್ ಟಾಪ್ ಪತ್ತೆಯಾದ ಬಳಿಕ ಆತಂಕಕ್ಕೆ ಕಾರಣವಾಗಿತ್ತು.ಈ ಅನುಮಾನದ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿದಾಗ ಸಜೀವ ಬಾಂಬ್ ಪತ್ತೆಯಾಗಿದೆ. ಲಾಪ್ ಟಾಪ್ ವಿಮಾನ ನಿಲ್ದಾಣದ ಟಿಕೆಟ್ ಕೌಂಟರ್ ಹತ್ತಿರ ಪತ್ತೆಯಾಗಿತ್ತು. ಬಳಿಕ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ ಎಲ್ಲಾ ವಿಮಾನಗಳ ಹಾರಾಟದ ಮೇಲೆ ನಿಗಾ ಇಡಲಾಯಿತು. ಆದರೆ ಸದ್ಯ ವಿಮಾನಗಳ ಸಂಚಾರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಇದೀಗ ವಿಮಾನ ನಿಲ್ದಾಣಕ್ಕೆ 3 ಕಡೆಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗುತ್ತಿದ್ದು ಹೀಗಾಗಿ ಆತಂಕ ಹೆಚ್ಚಾಗಿದೆ. ಆದರೆ ಪೊಲೀಸ್ ಇಲಾಖೆ ಹಾಗೂ ಭದ್ರತಾ ಸಿಬಂದಿಗಳು ತಪಾಸಣೆ ನಡೆಸುತ್ತಿದ್ದಾರೆ. ಪತ್ತೆಯಾಗಿರುವ ಬಾಂಬ್ ನಿಷ್ಕ್ರಿಯ ಮಾಡುವ ಕೆಲಸ ನಡೆದಿದೆ. ಮೈದಾನದ ನಿರ್ಜನ ಪ್ರದೇಶದಲ್ಲಿ ಬಾಂಬ್ ನಿಷ್ಕ್ರಿಯಗೊಳಿಸಲು ಸಿದ್ಧತೆ ಮಾಡಲಾಗಿತ್ತು.
ಬೆಳಗ್ಗೆ ಆಟೋದಲ್ಲಿ ಬಂದ ವ್ಯಕ್ತಿ ವಿಮಾನ ನಿಲ್ದಾಣದ ಒಳಗೆ ಬ್ಯಾಗ್ ಇಟ್ಟು ಹೋಗಿದ್ದಾನೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…