ಮಂಗಳೂರು : ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಘರ್ಷಣೆಯಲ್ಲಿ ಮೃತಪಟ್ಟ ಇಬ್ಬರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಲೀಬಾರ್ ನಡೆಸುವಂತಹ ಸ್ಥಿತಿ ನಿರ್ಮಾಣವಾಗಿರಲಿಲ್ಲ. ಎನ್‌ಆರ್‌ಸಿ ಮತ್ತು ಸಿಎಎ ವಿರುದ್ಧ ರಾಜ್ಯ ಸೇರಿದಂತೆ ದೇಶದ ವಿವಿಧೆಡೆ ಪ್ರತಿಭಟನೆ ನಡೆದಿದೆ. ಮಂಗಳೂರಿಗಿಂತಲೂ ಹೆಚ್ಚು ಜನರು ಸೇರಿದ್ದ ಕಡೆಗಳಲ್ಲಿಯೇ ಪೊಲೀಸರು ಪ್ರತಿಭಟನೆ ನಿಯಂತ್ರಿಸಿದ್ದಾರೆ. ಆದರೆ ಇಲ್ಲಿನ ಪೊಲೀಸರಿಗೆ ಏಕೆ ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದರು.ಪ್ರತಿಭಟನೆ ನಡೆಸುವುದಾಗಿ ಮೊದಲೇ ಮಾಹಿತಿ ನೀಡಲಾಗಿತ್ತು. ಕೊನೆಗಳಿಗೆಯಲ್ಲಿ ಪೊಲೀಸರು ಮಾಹಿತಿ ನಿರಾಕರಿಸಿದ್ದರು. ನಿಷೇಧಾಜ್ಞೆ ಹೇರಿರುವ ಮಾಹಿತಿ ಇಲ್ಲದೆ ಜನರು ಪ್ರತಿಭಟನೆಗಾಗಿ ಬೀದಿಗಳಿದಿದ್ದರು ಎಂದು ಹೇಳಿದರು. ಗೋಲೀಬಾರ್ ಮತ್ತು ಇಬ್ಬರು ಅಮಾಯಕರ ಸಾವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ನೇರ ಹೊಣೆ ಎಂದು ನುಡಿದರು.
ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಜಿಲ್ಲಾ ಘಟದ ಅಧ್ಯಕ್ಷ ಕೆ.ಹರೀಶ್‌ಕುಮಾರ್ ಉಪಸ್ಥಿತರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…