(ಸಾಂದರ್ಭಿಕ ಚಿತ್ರ)
ಸುಳ್ಯ: ಮಂಗಳೂರಿನಿಂದ ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಿಸಬೇಕು, ಇದರಿಂದ ಸಾಕಷ್ಟು ಪ್ರಯಾಣಿಕರಿಗೆ ಅನುಕೂಲವಾಗುತ್ತದೆ, ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಎಡಮಂಗಲದ ವಿನಯಚಂದ್ರ ಎಂಬವರು ಪ್ರಧಾನಿಗಳ ಕಾರ್ಯಾಲಯಕ್ಕೆ ಪತ್ರ ಬರೆದಿದ್ದರು. ಇದಕ್ಕೆ ಪ್ರಧಾನಿಗಳ ಕಾರ್ಯಾಲಯದಿಂದ ಪ್ರತಿಕ್ರಿಯೆ ಬಂದಿದ್ದು ಈ ಬಗ್ಗೆ ಕ್ರಮ ಕೈಗೊಂಡು ವರದಿ ನೀಡುವಂತೆ ರೈಲ್ವೇ ಇಲಾಖೆಗೆ ಸೂಚನೆ ನೀಡಲಾಗಿದೆ.
ಮಂಗಳೂರಿನಿಂದ ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಿಸಬೇಕು ಹಾಗೂ ಈ ರೈಲು ಮರುದಿನ ಬೆಳಗ್ಗೆ 6.30 ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಬರಬೇಕು. ಈ ದಾರಿ ಮದ್ಯೆ ಇರುವ ಎಲ್ಲಾ ಪ್ರಯಾಣಿಕ ಬಳಕೆದಾರರು ಪ್ಯಾಸೆಂಜರ್ ರೈಲಿನಲ್ಲಿ ಸುಬ್ರಹ್ಮಣ್ಯಕ್ಕೆ ತೆರಳಿ ಅಲ್ಲಿಂದ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಗಳೂರು ಕಡೆ ಪ್ರಯಾಣಿಸಬಹುದು. ಹಾಗೆಯೇ ಪ್ರತಿದಿನ ಬೆಂಗಳೂರು ಕಡೆಯಿಂದ ಬಂದವರು ಬೆಳಗ್ಗಿನ (6.30) ಪ್ಯಾಸಂಜರ್ ರೈಲಿನಲ್ಲಿ ಅವರವರ ನಿಲ್ದಾಣದಲ್ಲಿ ಇಳಿದುಕೊಳ್ಳಬಹುದು. ಇದರಿಂದ 90 ಶೇಕಡಾ ನಿಲುಗಡೆ ಬೇಕೆನ್ನುವವರಿಗೆ ಪರಿಹಾರವಾಗಲಿದೆ ಎಂದು ಎಡಮಂಗಲದ ಬಾಕಿಜಾಲ್ ವಿನಯಚಂದ್ರ ಅವರು ಜು.23 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಾಲಯಕ್ಕೆ ಪತ್ರ ಬರೆದಿದ್ದರು. ಇದೀಗ ಅದಕ್ಕೆ ಪ್ರತಿಕ್ರಿಯೆ ಬಂದಿದೆ.
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…