ಮಂಗಳೂರು: ಮನಸ್ಸಿನ ಒತ್ತಡ ನಿವಾರಣೆಗೆ ಯೋಗ ಸಹಕಾರಿ. ಪ್ರಸ್ತುತ ದಿನಗಳಲ್ಲಿ ಪಾಶ್ಚಾತ್ಯರು ಕೂಡ ಯೋಗದೆಡೆಗೆ ಮುಖ ಮಾಡಿರುವುದು ಯೋಗದ ಪ್ರಾಮುಖ್ಯತೆಯನ್ನು ತೋರಿಸಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಎಂ.ಲಕ್ಷ್ಮೀಪ್ರಸಾದ್ ಅಭಿಪ್ರಾಯಪಟ್ಟರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಮತ್ತು ಪತ್ರಿಕಾಭವನ ಟ್ರಸ್ಟ್ ವತಿಯಿಂದ ಶುಕ್ರವಾರ ಪ್ರೆಸ್‌ಕ್ಲಬ್‌ನಲ್ಲಿ ನಡೆದ ವಿಶ್ವ ಯೋಗ ದಿನಾಚರಣೆ ಮತ್ತು ಕಳೆದ ಒಂದು ತಿಂಗಳಿನಿಂದ ನಡೆದ ಯೋಗ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಯೋಗ ಎಂಬುದು ಜೀವನಶೈಲಿ. ಪ್ರತಿಯೊಬ್ಬರೂ ತಮ್ಮ ನಿತ್ಯ ಜೀವನದಲ್ಲಿ ಯೋಗ ಅಳವಡಿಸಿಕೊಂಡಾಗ ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಗಟ್ಟಿಯಾಗಲು ಸಾಧ್ಯ. ನಮ್ಮ ನಿತ್ಯ ಒತ್ತಡ ಮತ್ತು ಜಂಜಾಟದಿಂದಾಗಿ ಆರೋಗ್ಯದ ಮೇಲೆ ಪರಿಣಾಮಗಳು ಬೀರುತ್ತಿವೆ. ಆದ್ದರಿಂದ ನಮ್ಮನ್ನು ನಾವು ಯೋಗದಲ್ಲಿ ತೊಡಗಿಸಿಕೊಂಡಾಗ ಇವೆಲ್ಲಕ್ಕೂ ಮುಕ್ತಿ ಕಾಣಿಸಲು ಸಾಧ್ಯ ಎಂದು ಲಕ್ಷ್ಮೀಪ್ರಸಾದ್ ಹೇಳಿದರು.
ಐಸಿರಿ ಹೆಲ್ದಿ ಇಂಡಿಯಾ ಮಿಷನ್ ಇದರ ದರ್ಶನ್ ಜೈನ್ ಮಾತನಾಡಿ, ಯೋಗ ಶಿಬಿರಗಳು ದಿನ ಲೆಕ್ಕಕ್ಕೆ ಸೀಮಿತವಾಗಬಾರದು. ಅದು ನಿರಂತರವಾಗಿರಬೇಕು. ಆ ದೃಷ್ಟಿಯಿಂದ ಐಸಿರಿ ಹೆಲ್ತ್ ಇಂಡಿಯಾ ವತಿಯಿಂದ ದಿನನಿತ್ಯ ಉಚಿತ ಯೋಗ ಕಾರ್ಯಕ್ರಮ ಆಯೋಜಿಸುವ ಚಿಂತನೆ ನಡೆಸಿದ್ದೇವೆ ಎಂದರು.
ಇದೇ ಸಂದರ್ಭ ಪತ್ರಕರ್ತರಿಗೆ ನಿರಂತರ ಒಂದು ತಿಂಗಳ ಕಾಲ ಯೋಗ ತರಬೇತಿ ನೀಡಿದ ಯೋಗ ಶಿಕ್ಷಕಿ ಭವ್ಯಾ ಶೆಟ್ಟಿ ಅವರನ್ನು ಗೌರವಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.ದ.ಕ.ಜಿಲ್ಲಾ ಪತ್ರಕರ್ತರ ಸಮ್ಮೇಳನ ಸಮಿತಿಯ ಸಂಚಾಲಕ ಜಗನ್ನಾಥ ಶೆಟ್ಟಿ ಬಾಳ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು. ಒಂದು ತಿಂಗಳ ಕಾಲ ಯೋಗ ತರಬೇತಿಯಲ್ಲಿ ಪಾಲ್ಗೊಂಡ ಪತ್ರಕರ್ತರಾದ ರಾಘವ ಎಂ ಮತ್ತು ಭಾಸ್ಕರ ರೈ ಕಟ್ಟ ಅನಿಸಿಕೆ ವ್ಯಕ್ತಪಡಿಸಿದರು.
ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಹರೀಶ್ ಮೋಟುಕಾನ ಸ್ವಾಗತಿಸಿ, ಆರ್.ಸಿ.ಭಟ್ ಕಾರ್ಯಕ್ರಮ ನಿರೂಪಿಸಿದರು. ಸುರೇಶ್ ಡಿ ಪಳ್ಳಿ ವಂದಿಸಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…