ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರಿನ ಎ ಜೆ ಆಸ್ಪತ್ರೆಯ ಸಹಯೋಗದೊಂದಿಗೆ ಮಂಗಳೂರು ಪತ್ರಿಕಾ ಭವನದಲ್ಲಿ ಪ್ರತಿ ತಿಂಗಳು ನಡೆಯುವ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರ ಉಚಿತ ಅರೋಗ್ಯ ತಪಾಸಣಾ ಶಿಬಿರ ‘ಮೀಡಿಯಾ ಹೆಲ್ತ್ ಕ್ಲೀನಿಕ್’ ಮಂಗಳವಾರ ನಡೆಯಿತು. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗೆ ನಡೆದ ಶಿಬಿರದಲ್ಲಿ ಹಲವು ಮಂದಿ ಪತ್ರಕರ್ತರು ಆರೋಗ್ಯ ತಪಾಸಣೆ ನಡೆಸಿದರು. ಮಂಗಳೂರಿನ ಎ ಜೆ ಆಸ್ಪತ್ರೆಯ ವೈದ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ನಡೆಸಿದರು. ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಹಾಗು ಕಾರ್ಯಕಾರಿ ಸಮಿತಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Advertisement
ಪ್ರತಿ ತಿಂಗಳ ಎರಡನೇ ಮಂಗಳವಾರ ಮಂಗಳೂರು ಪತ್ರಿಕಾ ಭವನದಲ್ಲಿ ಮೀಡಿಯಾ ಹೆಲ್ತ್ ಕ್ಲೀನಿಕ್ ನಡೆಯುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement