ಮಂಗಳೂರು : ಬಾಂಬ್ ಪತ್ತೆ ಪ್ರಕರಣ : ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾದ ಆರೋಪಿ ಆದಿತ್ಯ

January 22, 2020
11:43 AM

ಮಂಗಳೂರು:ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಆದಿತ್ಯ ರಾವ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಮೂಲಕ ಎಲ್ಲಾ ಸಂದೇಹಗಳಿಗೆ ತೆರೆ ಬಿದ್ದಂತಾಗಿದೆ.  ಬೆಂಗಳೂರು ನಗರದ  ಐಜಿಪಿ ಕಚೇರಿಗೆ ಬಂದು ಡಿಜಿಐಜಿ ನೀಲಮಣಿರಾಜು ಅವರ ಮುಂದೆ ಮಂಗಳವಾರ ರಾತ್ರಿ ಆದಿತ್ಯರಾವ್ ಶರಣಾಗಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಆರೋಪಿಯನ್ನು ಡಿಜಿ ಕಚೇರಿ ಸಿಬ್ಬಂದಿ ಹಲಸೂರು ಗೇಟ್​ ಪೊಲೀಸ್​ ಠಾಣೆ ವಶಕ್ಕೆ ನೀಡಲಾಗಿದ್ದು, ರಾತ್ರಿ ಆರೋಪಿಯ ವಿಚಾರಣೆ ನಡೆಸಲಾಗಿದೆ. ಈ ವೇಳೆ ಬಾಂಬ್​ ಇಟ್ಟಿದ್ದು ನಾನೇ ಎಂದು ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ.

ಸೋಮವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣ ಬಳಿ ಅನುಮಾನಾಸ್ಪದ ಬ್ಯಾಗ್​ ಪತ್ತೆಯಾಗಿತ್ತು. ಬಳಿಕ ಪರಿಶೀಲನೆ ನಡೆಸಿದಾಗ ಸಜೀವ್​ ಬಾಂಬ್​ ಇರುವುದು ಪತ್ತೆಯಾಗಿತ್ತು. ನಂತರ ಬಾಂಬ್​ ನಿಷ್ಟ್ರಿಯ ದಳ ಬಾಂಬ್​ ಅನ್ನು ಕೆಂಜಾರು ಮೈದಾನದಲ್ಲಿ ಸ್ಫೋಟಿಸಿ ಆತಂಕ ನಿವಾರಣೆ ಮಾಡಿತ್ತು. ಬಳಿಕ ಶಂಕಿತ ಆರೋಪಿಯ ಫೋಟೊ ಬಿಡುಗಡೆ ಹಾಗೂ ಅಟೋದ ಚಿತ್ರ ಬಿಡುಗಡೆ ಮಾಡಿದ ಪೊಲೀಸರು ತನಿಖೆಗೆ ಆರಂಭಿಸಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ
July 28, 2026
12:32 PM
by: ಸಾಯಿಶೇಖರ್ ಕರಿಕಳ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror