Aditya Rao
ಮಂಗಳೂರು:ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಆದಿತ್ಯ ರಾವ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಮೂಲಕ ಎಲ್ಲಾ ಸಂದೇಹಗಳಿಗೆ ತೆರೆ ಬಿದ್ದಂತಾಗಿದೆ. ಬೆಂಗಳೂರು ನಗರದ ಐಜಿಪಿ ಕಚೇರಿಗೆ ಬಂದು ಡಿಜಿಐಜಿ ನೀಲಮಣಿರಾಜು ಅವರ ಮುಂದೆ ಮಂಗಳವಾರ ರಾತ್ರಿ ಆದಿತ್ಯರಾವ್ ಶರಣಾಗಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಆರೋಪಿಯನ್ನು ಡಿಜಿ ಕಚೇರಿ ಸಿಬ್ಬಂದಿ ಹಲಸೂರು ಗೇಟ್ ಪೊಲೀಸ್ ಠಾಣೆ ವಶಕ್ಕೆ ನೀಡಲಾಗಿದ್ದು, ರಾತ್ರಿ ಆರೋಪಿಯ ವಿಚಾರಣೆ ನಡೆಸಲಾಗಿದೆ. ಈ ವೇಳೆ ಬಾಂಬ್ ಇಟ್ಟಿದ್ದು ನಾನೇ ಎಂದು ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ.
ಸೋಮವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣ ಬಳಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು. ಬಳಿಕ ಪರಿಶೀಲನೆ ನಡೆಸಿದಾಗ ಸಜೀವ್ ಬಾಂಬ್ ಇರುವುದು ಪತ್ತೆಯಾಗಿತ್ತು. ನಂತರ ಬಾಂಬ್ ನಿಷ್ಟ್ರಿಯ ದಳ ಬಾಂಬ್ ಅನ್ನು ಕೆಂಜಾರು ಮೈದಾನದಲ್ಲಿ ಸ್ಫೋಟಿಸಿ ಆತಂಕ ನಿವಾರಣೆ ಮಾಡಿತ್ತು. ಬಳಿಕ ಶಂಕಿತ ಆರೋಪಿಯ ಫೋಟೊ ಬಿಡುಗಡೆ ಹಾಗೂ ಅಟೋದ ಚಿತ್ರ ಬಿಡುಗಡೆ ಮಾಡಿದ ಪೊಲೀಸರು ತನಿಖೆಗೆ ಆರಂಭಿಸಿದ್ದರು.
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನ, ರಾಶಿಗಳ ಸಂಯೋಜನೆ, ಮತ್ತು ಜನ್ಮಕುಂಡಲಿಯ ಭಾವಗಳು…
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…