Advertisement
ಸುದ್ದಿಗಳು

ಮಂಗಳೂರು ಬಾಂಬ್ ಪತ್ತೆ ಪ್ರಕರಣ : ಆರೋಪಿಗೆ 10 ದಿನ ಪೊಲೀಸ್ ಕಸ್ಟಡಿಗೆ : ಮಾಸ್ಟರ್ ಮೈಂಡ್ ನಾನೊಬ್ಬನೇ ಎಂದ ಆರೋಪಿ

Share

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣದ ಆರೋಪಿ ಆದಿತ್ಯ ರಾವ್‍ ನನ್ನು 10 ದಿನಗಳ ಕಾಲ ಪೊಲೀಸ್ ಕಷ್ಟಡಿಗೆ ವಹಿಸಿ 6ನೇ ಜೆ ಎಂ ಎಫ್ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ವಿಮಾನದಲ್ಲಿ ಸಜೀವ ಬಾಂಬ್ ಇಟ್ಟ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ತಾನೊಬ್ಬನೆ ಎಂದು ಆರೋಪಿ ಆದಿತ್ಯ ರಾವ್ ತನಿಖಾಧಿಕಾರಿಗಳ ವಿಚಾರಣೆ ವೇಳೆ ಇಂದು ಬಾಯ್ಬಿಟ್ಟಿದ್ದಾನೆ. ಹೀಗಾಗಿ ಇನ್ನಷ್ಟು ವಿಚಾರಣೆ ನಡೆಯುತ್ತಿದ್ದು ಈತ ಇನ್ನಷ್ಟು ಬಾಂಬ್ ತಯಾರಿಕೆ ಹಾಗೂ ಇತರ ಮಾಹಿತಿಗಳ ಬಗ್ಗೆ ಹಾಗೂ ಏಕೆ ಇಂತಹ ಕೃತ್ಯ ನಡೆಸಿದ್ದ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಈ ನಡುವೆ ಇಂಡಿಗೋ ವಿಮಾನ ಹೈದರಾಬಾದಿಗೆ ತೆರಳುತ್ತಿರುವ ಸಂದರ್ಭದಲ್ಲಿ ನಿಲ್ದಾಣದ ಅಧಿಕಾರಿಗಳಿಗೆ ಕರೆ ಮಾಡಿ ಬಾಂಬ್ ಇರಿಸಲಾಗಿದೆ ಎಂದು  ಹೇಳಿರುವ  ಹಿನ್ನೆಲೆಯಲ್ಲಿ ಆರೋಪಿ ಆದಿತ್ಯ ವಿರುದ್ಧ ಇಂಡಿಗೋ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.

ಬೆಂಗಳೂರಿನಲ್ಲಿ  ಪೊಲೀಸರಿಗೆ ಶರಣಾದ ಬಳಿಕ ಆರೋಪಿ ಆದಿತ್ಯ ರಾವ್ ನನ್ನು ಮಂಗಳೂರಿಗೆ ವಿಮಾನದ ಮೂಲಕ ಕರೆತಂದು ವಿಚಾರಣೆ ನಡೆಸಲಾಯಿತು. ಮಂಗಳೂರು ಪೊಲೀಸ್ ಆಯುಕ್ತ ಡಾ.ಹರ್ಷಾ ನೇತೃತ್ವದಲ್ಲಿ ಆರೋಪಿ ಆದಿತ್ಯ ರಾವ್ ನನ್ನು ತಡಾರಾತ್ರಿವರೆಗೆ ವಿಚಾರಣೆ ನಡೆಸಿದ ಬಳಿಕ ಜೆಎಮ್‍ಎಫ್‍ಸಿ 6ನೇ ಕೋರ್ಟ್ ನ್ಯಾಯಾಧೀಶ ಕಿಶೋರ್ ಕುಮಾರ್ ಕೆ.ಎನ್ ಅವರ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ 15 ದಿನ ಕಾಲ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಸಲ್ಲಿಸಿದರು.ನ್ಯಾಯಾಧೀಶರು  10 ದಿನಗಳ ಕಾಲ ಪೊಲೀಸ್ ಕಷ್ಟಡಿಗೆ ವಹಿಸಿ ಆದೇಶ ಹೊರಡಿಸಿದರು. ನ್ಯಾಯಾಲಯದಲ್ಲಿ ನಾನು ಮಾಡಿದ್ದೆಲ್ಲಾ ತಪ್ಪು ಎಂದು ಆದಿತ್ಯ ರಾವ್  ಒಪ್ಪಿಕೊಂಡಿದ್ದಾನೆ.

ತಾನೊಬ್ಬನೇ ಮಾಸ್ಟರ್ ಮೈಂಡ್ ಎಂದ ಆದಿತ್ಯ ರಾವ್:

ಮಂಗಳೂರಿನಲ್ಲಿ ಪೊಲೀಸರು ವಿಚಾರಣೆ ನಡೆಸುವ ವೇಳೆ ತಾನೊಬ್ಬನೇ ಈ ಕೃತ್ಯದ ಹಿಂದಿದ್ದು ಬೇರೆ ಯಾವುದೇ ಉದ್ದೇಶ ಇರಲಿಲ್ಲ, ತಾನು ಮಾಡಿದ್ದು ತಪ್ಪು ಎಂದು ಪದೇ ಪದೇ ಹೇಳಿದ್ದಾನೆ. ಬಾಂಬ್ ತಯಾರಿಕೆಯ ಬಗ್ಗೆ ಈತ ನಡೆಸಿರುವ ಶೊಧ, ಇಂಟರ್ನೆಟ್ ಮೂಲಕ ನಡೆಸಿದ ಶೋಧ ಹಾಗೂ ಚಾಕಚಕ್ಯತೆ ಬಗ್ಗೆ ತನಿಖಾಧಿಕಾರಿಗಳೇ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ ಪ್ರಯೋಗಕ್ಕೆ ಸುಮಾರು ಬಗೆಯ ಸಾಮಾಗ್ರಿ ತರಿಸಿದ್ದಾನೆ ಎನ್ನಲಾಗಿದೆ.ತನಿಖೆಯ ವೇಳೆ ಮಾನಸಿಕವಾಗಿಯೂ ದೃಢವಾಗಿರದೇ ಇರುವ ಕಾರಣದಿಂದ ಆದಿತ್ಯ ರಾವ್ ಮಾನಸಿಕ  ಸ್ಥಿತಿಗತಿ ಬಗ್ಗೆಯೂ ವೈದ್ಯರಿಂದ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಬೆದರಿಕೆ ಮತ್ತು ವಿಧ್ವಂಸಕ ಕೃತ್ಯ – ಕೇಸು ದಾಖಲು:

ಈ ಪ್ರಕರಣವನ್ನು ರಾಷ್ಟ್ರೀಯ ಬೆದರಿಕೆ ಮತ್ತು ವಿಧ್ವಂಸಕ ಕೃತ್ಯವೆಂದು ಪರಿಗಣಿಸಿ, ಆರೋಪಿ ಆದಿತ್ಯ ರಾವ್ ವಿರುದ್ಧ ಕಾನೂನುಬಾಹಿರ ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಕೇಸ್ ದಾಖಲಿಸುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ|ಪಿಎಸ್ ಹರ್ಷಾ  ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆರೋಪಿ ಆದಿತ್ಯ ರಾವ್ ಈ ಹಿಂದೆ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿ ಜೈಲು ಸೇರಿದ್ದ ವೇಳೆಯೇ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲು ಸಂಚು ರೂಪಿಸಿದ್ದ ಎಂದು ತನಿಖೆಯಿಂದ ತಿಳಿದಿದೆ ಎಂದು ಘಟನೆಯನ್ನು  ವಿವರಿಸಿದ ಹರ್ಷಾ ಆರೋಪಿ ಈ ಹಿಂದೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿ ಚಿಕ್ಕಬಳ್ಳಾಪುರ ಜೈಲು ಪಾಲಾಗಿದ್ದ ವೇಳೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಡುವ ಸಂಚು ರೂಪಿಸಿದ್ದ. ಇದಕ್ಕಾಗಿ ವಿವಿಧ ವೆಬ್ ಸೈಟ್ಗ, ಯೂಟೂಬ್ ನೋಡುತ್ತಿದ್ದ ಎಂದು ಒಪ್ಪಿಕೊಂಡಿದ್ದಾನೆ ಎಂದು ವಿವರಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

8 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago