Advertisement
Political mirror

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ: ಶೆ.59.67 ಮತದಾನ

Share

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳಿಗೆ ನ.12 ರಂದು ನಡೆದ ಚುನಾವಣೆಯಲ್ಲಿ ಶೆ.59.67 ಮತದಾನವಾಗಿದೆ. 3,94,894 ಮತದಾರರ ಪೈಕಿ 2,35,628 ಮಂದಿ ಮತ ಚಲಾಯಿಸಿದ್ದಾರೆ. ಮತದಾನ ಶಾಂತಿಯುತವಾಗಿ ನಡೆಯಿತು.

ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ನಗರದ ಲೇಡಿಹಿಲ್ ಚರ್ಚ್ ಸಮೀಪದ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮತ ಚಲಾಯಿಸಿದರು. ಮತದಾನಕ್ಕಾಗಿ 448 ಮತಗಟ್ಟೆಗಳನ್ನು ಸಿದ್ಧಪಡಿಸಲಾಗಿತ್ತು. 27 ಮಂದಿ ಪಕ್ಷೇತರರ ಸಹಿತ 60 ವಾರ್ಡ್‌ಗಳಲ್ಲಿ 180 ಸ್ಪರ್ಧಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ. ನ.14ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಶಾಂತಿಯುತ ಮತದಾನ: ಡಿಸಿ ಕೃತಜ್ಞತೆ : ಮಂಗಳೂರು ಮಹಾನಗರಪಾಲಿಕೆಗೆ ಯಾವುದೇ ಗೊಂದಲಗಳಿಲ್ಲದೇ, ಶಾಂತಿಯುತವಾಗಿ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಯಲು ಸಹಕರಿಸಿದ ಮತದಾರರಿಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಸಿಂಧೂ ಬಿ. ರೂಪೇಶ್ ಕೃತಜ್ಞತೆ ಸಲ್ಲಿಸಿದ್ದಾರೆ. ಚುನಾವಣಾ ಸಿದ್ಧತೆಗಳಿಗೆ ಕಾಲಾವಕಾಶ ಕಡಿಮೆ ಇದ್ದರೂ, ಯಾವುದೇ ಲೋಪಗಳಿಲ್ಲದೆ ಚುನಾವಣೆ ನಡೆದಿದೆ. ಇದಕ್ಕಾಗಿ ತೊಡಗಿಸಿಕೊಂಡ ಎಲ್ಲಾ ಅಧಿಕಾರಿ, ಸಿಬ್ಬಂದಿಗಳಿಗೆ, ಪೊಲೀಸರಿಗೆ ಧನ್ಯವಾದ ಸಲ್ಲಿಸಿರುವ ಅವರು, ಚುನಾವಣೆ ಸುಗಮವಾಗಲು ಸಹಕರಿಸಿದ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳಿಗೂ ಕೃತಜ್ಞತೆ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago