ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದ್ದು 11 ಗಂಟೆಯ ವೇಳೆಗೆ ಶೇ.24.50 ಮತದಾನವಾಗಿದೆ.
ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ನಗರದ ಲೇಡಿಹಿಲ್ ಚರ್ಚ್ ಸಮೀಪದ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯ ಮತ ಚಲಾಯಿಸಿದರು.
448 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. 27 ಮಂದಿ ಪಕ್ಷೇತರರ ಸಹಿತ 60 ವಾರ್ಡ್‌ಗಳಲ್ಲಿ 180 ಸ್ಪರ್ಧಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ. 60 ವಾರ್ಡ್‌ಗಳ 1,99,989 ಪುರುಷರು ಮತ್ತು 1,87,465 ಮಹಿಳೆಯರು ಹಾಗೂ 63 ಇತರರ ಸಹಿತ 3,87,517 ಮತದಾರರರು 180 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ನ.14ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…