Advertisement
ಸುದ್ದಿಗಳು

ಮಂಗಳೂರು ವಿವಿ ಅಂತರ್ ಕಾಲೇಜು ಮಟ್ಟದ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

Share

ಪುತ್ತೂರು: ಹಿಂದೆ ಕಬಡ್ಡಿ ಕೇವಲ ಸ್ಪರ್ಧೆಯಾಗಿತ್ತು, ಆದರೆ ಇಂದು ಕಬಡ್ಡಿ ಆಟ ಉದ್ಯೋಗವಾಗಿ, ವೃತ್ತಿಯಾಗಿ ಮಾರ್ಪಾಡಾಗಿದೆ. ಇದರಿಂದ ಬದುಕು ಕಟ್ಟಿಕೊಂಡವರ ಸಂಖ್ಯೆ ಅಧಿಕವಾಗಿದೆ. ಯಾವುದೇ ಕ್ಷೇತ್ರದಲ್ಲಿ ಸಾಧನೆ ಸುಲಭ ಸಾಧ್ಯವಿಲ್ಲ. ಉತ್ತಮ ಕಬಡ್ಡಿ ಆಟಗಾರನಾಗಲು ಕಠಿಣ ಶ್ರಮ, ಪ್ರಯತ್ನ ಅಗತ್ಯ ಎಂದು ಬೆಂಗಳೂರಿನ ವಿಜಯ ಬ್ಯಾಂಕ್ ಉದ್ಯೋಗಿ, ರಾಷ್ಟ್ರೀಯ ಪ್ರೊ. ಕಬಡ್ಡಿ ಆಟಗಾರ ಪ್ರಶಾಂತ್ ರೈ ಕೈಕಾರ ಹೇಳಿದರು.

Advertisement
Advertisement
Advertisement

ಅವರು ಇಲ್ಲಿನ ವಿವೇಕಾನಂದ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಕಾಲೇಜಿನ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ಎರಡು ದಿನಗಳ ಮಂಗಳೂರು ವಿವಿ ಅಂತರ್ ಕಾಲೇಜು ಮಟ್ಟದ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.
ಯಾವುದೇ ಕ್ಷೇತ್ರದಲ್ಲಿ ಸಾಧಕನಾಗಿ ಸಮಾಜದಲ್ಲಿ ಗುರುತಿಸಿಕೊಳ್ಳುವುದು ಸುಲಭವಲ್ಲ. ಶಿಕ್ಷಣದಿಂದ ಹೊರತಾಗಿ ಕ್ರೀಡೆಯಲ್ಲಿ ಅದರಲ್ಲೂ ಕಬಡ್ಡಿ ಆಟದ ಮೂಲಕ ತನ್ನನ್ನು ತಾನು ಗುರುತಿಸಿಕೊಳ್ಳುವಂತಾಗಿದೆ. ಇದು ಓರ್ವ ಕ್ರೀಡಾಳುವಾಗಿ ಹೆಮ್ಮೆಯ ವಿಚಾರ ಎಂದು ಹೇಳಿದರು.

Advertisement

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕಬಡ್ಡಿ ಭಾರತದ ದೇಸಿ ಹಾಗೂ ಮಣ್ಣಿನ ಆಟ. ವ್ಯಕ್ತಿಯ ಬುದ್ಧಿವಂತಿಕೆ, ಶಕ್ತಿ, ಪೌರುಷವನ್ನು ಒಗ್ಗೂಡಿಸುವ ವೈಶಿಷ್ಟ್ಯಪೂರ್ಣ ಆಟ ಕಬಡ್ಡಿಯಾಗಿದೆ. ಸ್ಪರ್ಧೆಯ ಸಮಯದಲ್ಲಿ ತಮ್ಮ ಸಂಸ್ಥೆಯನ್ನು ಪ್ರತಿನಿಧಿಸಿ ಜಯಶಾಲಿಯಾಗಬೇಕು. ಇನ್ನುಳಿದ ಸಮಯದಲ್ಲಿ ಸ್ನೇಹಿತರಂತೆ ಇರಬೇಕು ಎಂದು ಹೇಳಿದರು.
ಮಂಗಳೂರು ವಿವಿಯ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಕಿಶೋರ್ ಕುಮಾರ್ ಸಿ.ಕೆ. ಮಾತನಾಡಿ, ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲರಿಗೂ ಶುಭಹಾರೈಸಿ ಮಂಗಳೂರು ವಿಶ್ವವಿದ್ಯಾನಿಲಯವು ಕ್ರೀಡೆಗೆ ವಿಶೇಷ ಆದ್ಯತೆ ನೀಡುತ್ತಿದೆ. ವಿವೇಕಾನಂದ ಕಾಲೇಜು ವಿವಿಧ ಬಗೆಯ ಕ್ರೀಡೆಗಳನ್ನು ಯಶಸ್ವಿಯಾಗಿ ಸಂಘಟಿಸಿ ಉತ್ತಮ ಹೆಸರು ಪಡೆದಿದೆ ಎಂದರು.

ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪಿ. ಶ್ರೀನಿವಾಸ ಪೈ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡಾ ಮನೋಭಾವವನ್ನು ಇಟ್ಟುಕೊಂಡು ಸ್ಪರ್ಧೆಯಲ್ಲಿ ಜಯಶಾಲಿಯಾಗುವ ಜವಾಬ್ದಾರಿ ಕ್ರೀಡಾಳುಗಳದ್ದು. ಸ್ಪರ್ಧೆ ಸ್ನೇಹದ ಬಂಧವನ್ನು ಬೆಳೆಸುವಂತಿರಬೇಕು. ಕಬಡ್ಡಿ ಕೇವಲ ಸ್ಪರ್ಧೆಯಾಗದೆ ಅದೊಂದು ಹಬ್ಬವಾಗಬೇಕು ಎಂದು ನುಡಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್, ನಿರ್ದೇಶಕ ಗುಣಪಾಲ ಜೈನ್, , ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್., ಆಡಳಿತ ಮಂಡಳಿಯ ಸದಸ್ಯ ಕೃಷ್ಣ ನಾಯ್ಕ್ ಎ., ವಿವೇಕಾನಂದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಜ್ಯೋತಿ ಕುಮಾರಿ ಪಿ.ಸಿ., ಯತೀಶ್ ಕುಮಾರ್ ಬಿ. ಉಪಸ್ಥಿತರಿದ್ದರು.

Advertisement

ಮಂಗಳೂರು ವಲಯದ ಮಂಗಳೂರು, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ತಾಲೂಕು ಮತ್ತು ಕೊಡಗು ಜಿಲ್ಲೆಯಿಂದ ಸುಮಾರು 47 ಕಾಲೇಜುಗಳು ಭಾಗವಹಿಸಿವೆ. ಪ್ರಥಮ ಬಾರಿಗೆ ಮ್ಯಾಟ್ ಅಂಗಳದ ಕಬಡ್ಡಿ ಪಂದ್ಯಾಟ ನಡೆಯುತ್ತಿದ್ದು, ವಿವೇಕಾನಂದ ಕಾಲೇಜು 40 ವರ್ಷಗಳ ಬಳಿಕ ಈ ಪಂದ್ಯಾಟದ ಆತಿಥ್ಯವನ್ನು ವಹಿಸಿದೆ.

ರಶ್ಮಿ, ಅನುಷಾ ಪ್ರಾರ್ಥಿಸಿದರು. ಕಾಲೇಜಿನ ಪ್ರಾಚಾರ್ಯ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಸ್ವಾಗತಿಸಿದರು. ವಿವೇಕಾನಂದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ವಂದಿಸಿದರು. ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿಜಯಸರಸ್ವತಿ ಕಾರ್ಯಕ್ರಮ ನಿರೂಪಿಸಿದರು.

Advertisement

ಕಬಡ್ಡಿ ಇಂದು ನನಗೆ ಬದುಕು ನೀಡಿದೆ. ಪ್ರೊ ಕಬಡ್ಡಿ ನಾನು ನಿರೀಕ್ಷಿಸದಷ್ಟು ಆರ್ಥಿಕ ಚೈತನ್ಯ ನೀಡಿದೆ. ಪ್ರೊ ಕಬಡ್ಡಿಯ ಮೊದಲ ಎರಡು ಆವೃತ್ತಿಗಳಲ್ಲಿ 79 ಹಾಗೂ 77 ಲಕ್ಷ ರೂಪಾಯಿ ನನಗೆ ದೊರೆತಿದೆ. ಸಮರ್ಪಣಾ ಭಾವದಿಂದ ಯಾವುದೇ ಒಂದು ಕ್ಷೇತ್ರದಲ್ಲಿ ತೊಡಗಿಕೊಂಡರೆ ಉನ್ನತ ಬದುಕು ನಮ್ಮದಾಗುತ್ತದೆ – ಪ್ರಶಾಂತ್ ರೈ ಕೈಕಾರ

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶ್ರೀಲಂಕಾದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ |

ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…

7 hours ago

ರೈತ ಉಪಯೋಗಿ ಬಗೆ ಬಗೆಯ ಸರಕು ಸಾಗಣೆ ಗಾಡಿಗಳು

ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…

17 hours ago

ಪ್ರಯಾಗ್ ರಾಜ್ ನಲ್ಲಿ  ಮಹಾ ಕುಂಭಮೇಳ | 150ಕ್ಕೂ ಹೆಚ್ಚು ವಿಶೇಷ ರೈಲು

ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ  ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ  ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …

17 hours ago

ಆಧುನಿಕತೆಯಿಂದಾಗಿ ಕೃಷಿ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ

ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…

17 hours ago

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಿಶೇಷ ಫಿಲ್ಟರ್ ಕಾಫಿ ಕೆಫೆ – ಸರ್ಕಾರ ಒಪ್ಪಂದ | ಕಾಫಿ ಉದ್ಯಮ ಉತ್ತೇಜಿಸಲು ಮಹತ್ವದ ಹೆಜ್ಜೆ |

ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು…

17 hours ago

ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ |  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. …

17 hours ago