ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ದ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ಕಾರಣವಾದ ಅಂಶಗಳ ಬಗ್ಗೆ ಬಲವಾದ ಗುಮಾನಿಗಳಿದ್ದು ಉನ್ನತ ಮಟ್ಟದ ತನಿಖೆ ನಡೆಸಬೇಕು. ತಕ್ಷಣವೇ ಪೊಲೀಸ್ ಕಮೀಷನರ್ ಅವರನ್ನು ಅಮಾನತುಗೊಳಿಸಿ ದಕ್ಷ ಅಧಿಕಾರಿಯೊಬ್ಬರನ್ನು ಮಂಗಳೂರಿಗೆ ನೇಮಿಸಬೇಕು ಎಂದು ಅವರು ಮುಖ್ಯ ಮಂತ್ರಿಗಳನ್ನು ಡಿವೈಎಫ್ಐ ಅಧ್ಯಕ್ಷ ಮುನೀರ್ ಕಾಟಿಪಳ್ಳ ಒತ್ತಾಯಿಸಿದ್ದಾರೆ.
ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆಗೆ ಮುಂದಾದವರನ್ನು ಮನವೊಲಿಸುವ, ರಾಜ್ಯದ ವಿವಿದೆಡೆ ನಡೆದಂತೆ ಶಾಂತಿಯುತ ಧರಣಿಗೆ ಅವಕಾಶ ಮಾಡಿಕೊಡುವ ಮೂಲಕ ಪರಿಸ್ಥಿತಿಯನ್ನು ನಿಭಾಯಿಸುವ ಸಾಧ್ಯತೆಗಳಿದ್ದರೂ, ನಿಷೇಧಾಜ್ಞೆ ಉಲ್ಲಂಘನೆಯ ನೆಪವನ್ನೇ ಮುಂದಿಟ್ಟು ಪ್ರತಿಭಟನೆಗಾಗಿ ಗುಂಪು ಸೇರಿದ್ದ ಜನರ ಮೇಲೆ ತೀವ್ರತರದ ಬಲ ಪ್ರಯೋಗಿಸಿದ್ದು ಸಂಘರ್ಷಕ್ಕೆ ಕಾರಣವಾಗಿದೆ. ಬಂದರು ಪೊಲೀಸ್ ಠಾಣಾ ವ್ಯಾಪ್ತಿಯ ಒಂದು ಸಣ್ಣ ಭಾಗದಲ್ಲಷ್ಟೇ ನಡೆದ ಹಿಂಸಾಚಾರ, ಕಲ್ಲು ತೂರಾಟವನ್ನು ದೊಡ್ಡ ಪ್ರಮಾಣದಲ್ಲಿದ್ದ ಪೊಲೀಸರಿಗೆ ಗೋಲಿಬಾರ್ ನಡೆಸದೆ ನಿಯಂತ್ರಿಸಲು ಸಾಕಷ್ಟು ಅವಕಾಶಗಳಿದ್ದವು. ಕಮೀಷನರ್ ಅವರ ಹಠಮಾರಿತನ, ತಪ್ಪು ಗ್ರಹಿಕೆ, ಪೂರ್ವಾಗ್ರಹಗಳು ಪ್ರತಿಣಭಟನಾಕಾರರ ಮೇಲೆ ಗುಂಡು ಹಾರಾಟಕ್ಕೆ, ಇಬ್ಬರು ನಾಗರಿಕರ ಸಾವಿಗೆ ಕಾರಣವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…
ನಾಡಿನ ಸಮಸ್ತರಿಗೂ ಮಕರ ಸಂಕ್ರಾಂತಿ ಶುಭಾಶಯ. ರೈತರಿಗೂ ಇದು ಸುಗ್ಗಿಯ ಹಬ್ಬ. ಈ…
ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿಯ ತನಕವೂ ಪಶ್ಚಿಮದ ಗಾಳಿಯ ಪ್ರಭಾವ ಇರುವುದರಿಂದ…