ಸವಣೂರು : ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸ.ಹಿ.ಪ್ರಾ.ಶಾಲೆಯಲ್ಲಿ ಮುಖ್ಯಶಿಕ್ಷಕಿಯಾಗಿ ಸೇವೆಸಲ್ಲಿಸಿ ಹಾಸನ ಜಿಲ್ಲೆಯ ಹೊಸನಗರ ಹಿ.ಪ್ರಾ.ಶಾಲೆಗೆ ವರ್ಗಾವಣೆಗೊಂಡ ಕುಸುಮಾ ಐ.ಟಿ ಅವರಿಗೆ ಬೀಳ್ಕೊಡುಗೆ ಹಾಗೂ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಹೊನ್ನಪ್ಪ ಗೌಡ ಜಾರಿಗೆತ್ತಡಿ ಅವರಿಗೆ ಗೌರವಾರ್ಪಣೆ ಡಿ.9ರಂದು ಮಂಜುನಾಥಗರ ಶಾಲೆಯಲ್ಲಿ ನಡೆಯಿತು.
ಮಂಜುನಾಥನಗರ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಪುಟ್ಟಣ್ಣ ಪರಣೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸವಣೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಬಿ.ಕೆ ಅವರು ,ಶಿಕ್ಷಕಿ ಕುಸುಮಾ ಅವರು ಹಾಸನ ಜಿಲ್ಲೆಯವರಾದರೂ ಕಳೆದ 18 ವರ್ಷಗಳಿಂದ ತಮ್ಮ ಕುಟುಂಬದ ಜತೆ ಮಂಜುನಾಥನಗರದಲ್ಲೇ ವಾಸ್ತ್ಯವ್ಯ ಇದ್ದು ನಮ್ಮ ಊರಿನವರಂತೆಯೆ ಆಗಿದ್ದಾರೆ. ಶಾಲೆಯ ಬೆಳವಣಿಗೆಯಲ್ಲಿ ಇವರ ಪಾತ್ರ ಮಹತ್ವದ್ದು. ಅವರ ಪತಿ ಮಲ್ಲಿಕಾರ್ಜುನ ಅವರು ಊರಿನ ಎಲ್ಲಾ ಚಟುವಟಿಕೆಯಲ್ಲಿ,ಸಂಘ ಸಂಸ್ಥೆಗಳಲ್ಲಿ ಸಕ್ರೀಯಾರಗಿದ್ದುಕೊಂಡು ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.ಅಪರೂಪದ ಸಹೃದಯ ವ್ಯಕ್ತಿತ್ವ ಹೊಂದಿದ್ದು,ಶಾಲೆಯ ಬೆಳವಣಿಗೆಯ ಬಗ್ಗೆ ಅಪಾರ ಕಾಳಜಿ ಇತ್ತು ಎಂದರು.
ಮಂಜುನಾಥನಗರ ಪ್ರೌಢಶಾಲಾ ಮುಖ್ಯಶಿಕ್ಷಕಿ ಯಶೋಧಾ ವಿ, ಸವಣೂರು ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ, ವಿವೇಕಾನಂದ ಯುವಕ ಮಂಡಲದ ಗೌರವಾಧ್ಯಕ್ಷ ಸುಧೀರ್ ಕುಮಾರ್ ರೈ ಕುಂಜಾಡಿ, ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷ ವಿಮಲಾ, ಅಂಗನವಾಡಿ ಕಾರ್ಯಕರ್ತೆ ಸುಮಂಗಲಾ, ಶಾಲಾ ನಾಯಕಿ ಚೈತನ್ಯ , ವಿವೇಕಾನಂದ ಯುವಕ ಮಂಡಲದ ಸದಸ್ಯ ಸತ್ಯಪ್ರಕಾಶ್ , ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಶುಭ ಹಾರೈಸಿದರು.
ಗೋಡ್ರೆಜ್ ಕೊಡುಗೆ
ಈ ಸಂದರ್ಭ ವರ್ಗಾವಣೆಗೊಂಡ ಮುಖ್ಯಶಿಕ್ಷಕಿ ಕುಸುಮಾ ಮಲ್ಲಿಕಾರ್ಜುನ ಐ.ಟಿ ಅವರು ಶಾಲೆಗೆ ಗೋಡ್ರೆಜ್ ಕೊಡುಗೆಯಾಗಿ ನೀಡಿದರು. ಮಂಜುನಾಥನಗರ ಶಾಲಾ ಪ್ರಭಾರ ಮುಖ್ಯಶಿಕ್ಷಕಿ ಆ್ಯಗ್ನೇಸ್ ಪ್ರೆಸಿಲ್ಲಾ ಪಾಯಸ್ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಶಿಕ್ಷಕಿ ನಂದಿನಿ ಆರ್ ದೇವಾಡಿಗ ವಂದಿಸಿದರು. ಆರತಿ ಎಸ್ ಕಾರ್ಯಕ್ರಮ ನಿರೂಪಿಸಿದರು. ರೇಖಾ ಸಹಕರಿಸಿದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…