ಸವಣೂರು :ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘ ಇದರ ವತಿಯಿಂದ 36ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ನಡೆಯಿತು.
ಬೆಳಿಗ್ಗೆ ಪುರೋಹಿತರಾದ ಬಂಬಿಲ ಅನಂತ ಕಲ್ಲೂರಾಯರ ನೇತೃತ್ವದಲ್ಲಿ ಗಣೇಶ ವಿಗ್ರಹದ ಪ್ರತಿಷ್ಟೆ ಯ ಬಳಿಕ ಭಜನ ಕಾರ್ಯಕ್ರಮ,ಮಹಾಪೂಜೆ ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು.ಮದ್ಯಾಹ್ನ ನಡೆದಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿದ್ದಿವಿನಾಯಕ ಸೇವಾ ಸಂಘದ ಉಪಾಧ್ಯಕ್ಷ ಪ್ರಸಾದ್ ರೈ ಬೈಲಾಡಿ ವಹಿಸಿದ್ದರು..ವಕೀಲ ಮನೋಹರ ಎ. ಧಾರ್ಮಿಕ ಉಪನ್ಯಾಸ ನೀಡಿದರು.
ಸಿದ್ದಿವಿನಾಯಕ ಸೇವಾ ಸಂಘದ ಸ್ಥಾಪಕ ಕಾರ್ಯದರ್ಶಿ ಪುರಂದರ ಗೌಡ , ಸ್ಥಾಪಕ ಸದಸ್ಯ ಕೃಷ್ಣಪ್ಪ ಶೆಟ್ಟಿ ಬಂಬಿಲ ಅವರನ್ನು ಸನ್ಮಾನಿಸಲಾಯಿತು.ಇದೇ ಸಂದರ್ಭದಲ್ಲಿ ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಪಾಲ್ತಾಡಿಯ ಸಹಯೋಗದೊಂದಿಗೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ಉಪಾಧ್ಯಕ್ಷ ರವಿ ಕುಮಾರ್,ಸದಸ್ಯ ಸತೀಶ್ ಅಂಗಡಿಮೂಲೆ,ಗ್ರಾಮ ವಿಕಾಸ ಸಮಿತಿ ಮಾಜಿ ಅಧ್ಯಕ್ಷ ಸುಧಾಕರ ರೈ ಕುಂಜಾಡಿ ,ಮಂಜುನಾಥನಗರ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಪುಟ್ಟಣ್ಣ ಮಡಿವಾಳ ಪರಣೆ,ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ,ವಿವೇಕಾನಂದ ಯುವಕ ಮಂಡಲದ ಉಪಾಧ್ಯಕ್ಷ ಹರೀಶ್ ರೈ ಮಂಜುನಾಥನಗರ,ನಿತ್ಯ ಪ್ರಸಾದ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಸಿದ್ದಿ ವಿನಾಯಕ ಸೇವಾ ಸಂಘದ ಅಧ್ಯಕ್ಷ ಪ್ರವೀಣ್ ಬಂಬಿಲದೋಳ ಸ್ವಾಗತಿಸಿದರು.ಗೌರವಾಧ್ಯಕ್ಷ ಈಶ್ವರ ಕೆ.ಎಸ್ ವರದಿ ವಾಚಿಸಿದರು.ಪ್ರಧಾನ ಕಾರ್ಯದರ್ಶಿ ಉದಯ ಬಿ.ಆರ್ ವಂದಿಸಿದರು.ಸತ್ಯಪ್ರಕಾಶ್ ಬಹುಮಾನಿತರ ಪಟ್ಟಿ ವಾಚಿಸಿದರು.ಶಿಕ್ಷಕರಾದ ವಿನಯ್ ಬಂಬಿಲದೋಳ,ವಿನೋದ್ ಕುಮಾರ್ ಕೆ.ಎಸ್ ಕಾರ್ಯಕ್ರಮ ನಿರೂಪಿಸಿದರು.
‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…
ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…
ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…
ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…