ಕಾಸರಗೋಡು: ಅ.21 ರಂದು ನಡೆಯಲಿರುವ ಮಂಜೇಶ್ವರ ವಿಧಾನಸಭೆಯ ಉಪಚುನಾವಣೆಯಲ್ಲಿ ಕುಂಟಾರು ರವೀಶ ತಂತ್ರಿ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಸರಗೋಡು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದರು.
ಐದು ಕಡೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು ಬಿಜೆಪಿ ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಸುರೇಂದ್ರನ್ ಕೋನಿ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಇನ್ನುಳಿದಂತೆ ವಟ್ಟಿಯೂರ್ ಕಾವು ಕ್ಷೇತ್ರದಲ್ಲಿ ಎಸ್. ಸುರೇಶ್, ಎರ್ಣಾಕುಳಂ ಕ್ಷೇತ್ರದಲ್ಲಿ ಸಿ.ಜಿ. ರಾಜಗೋಪಾಲ್, ಅರೂರ್ ಕ್ಷೇತ್ರದಲ್ಲಿ ಕೆ.ಪಿ. ಪ್ರಕಾಶ್ ಬಾಬು ಅಭ್ಯರ್ಥಿಗಳಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಕೆ. ಸುರೇಂದ್ರನ್ ಪತ್ತನಂತಿಟ್ಟದಲ್ಲಿ ಮತ್ತು ಕೆ.ಪಿ. ಸುರೇಶ್ ಬಾಬು ಕೋಝಿಕೋಡ್ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಕೆ. ಸುರೇಂದ್ರನ್ ಕೇವಲ 89 ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು. ಅಂದು ನಷ್ಟವಾದ ಕ್ಷೇತ್ರವನ್ನು ಮರಳಿ ಪಡೆಯಲು ಈ ಬಾರಿ ರವೀಶ ತಂತ್ರಿ ಅವರನ್ನು ಪಕ್ಷ ಕಣಕ್ಕಿಳಿಸಿದೆ.
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…