ಮಂಡೆಕೋಲು: ದ ಕ ಜಿಲ್ಲೆಯ ವಿವಿದೆಡೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಸುಳ್ಯ ತಾಲೂಕಿನಲ್ಲಿ ಕೂಡಾ ವಿವಿದೆಡೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಕಳೆದ 3 ದಿನಗಳಿಂದ ಮಂಡೆಕೋಲಿನಲ್ಲೂ ಕೊರೋನಾ ಪಾಸಿಟಿವ್ ಬಂದಿರುವ ಬಗ್ಗೆ ಇದೀಗ ಜನರಿಗೆ ಆತಂಕವಿದೆ. ಆದರೆ ಯಾವುದೇ ಮಾಹಿತಿ ಇಲ್ಲದೆ ಜನರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಮಂಡೆಕೋಲು ನಿವಾಸಿಗಳು ತಿಳಿಸಿದ್ದಾರೆ.
ಮಂಡೆಕೋಲು ಗ್ರಾಮದ ಒಬ್ಬರಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು ಅವರ ಸಂಪರ್ಕ ಹೊಂದಿದವರು ಹೋಂ ಕ್ವಾರೆಂಟೈನ್ ಆಗಬೇಕು ಎಂದು ಆಶಾ ಕಾರ್ಯಕರ್ತೆಯರು ಕೆಲವು ಮನೆಗಳಿಗೆ ಮಾಹಿತಿ ನೀಡಿದ್ದಾರೆ. ಆದರೆ ಆರೋಗ್ಯ ಇಲಾಖೆ, ಸ್ಥಳೀಯ ಆಡಳಿತವು ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಲು ಮುಂದಾಗಿಲ್ಲ. ಹೀಗಾಗಿ ಮತ್ತಷ್ಟು ಆತಂಕವಾಗುತ್ತಿದೆ ಎಂದು ಮಂಡೆಕೋಲು ನಿವಾಸಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ತಕ್ಷಣವೇ ಮಂಡೆಕೋಲು ಪಂಚಾಯತ್ ಹಾಗೂ ಆರೋಗ್ಯ ಇಲಾಖೆ ಸ್ಥಳೀಯಾಡಳಿತ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.