ಸುಳ್ಯ: ಮಕ್ಕಳಿಗೆ ವೈಜ್ಞಾನಿಕ ಮತ್ತು ಪ್ರಗತಿಪರ ಜ್ಞಾನವನ್ನು ನೀಡುವುದರ ಜೊತೆಗೆ ನಮ್ಮ ರಾಷ್ಟ್ರೀಯ ಮೌಲ್ಯ ಮತ್ತು ಪರಂಪರೆಯನ್ನು ತಿಳಿಸುವ ಕೆಲಸ ನಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯೆ ಡಾ.ತೇಜಸ್ವಿನಿ ಗೌಡ ಹೇಳಿದ್ದಾರೆ.
ಜಾಲ್ಸೂರು ಗ್ರಾಮದ ವಿನೋಬಾನಗರದ ವಿವೇಕಾನಂದ ವಿದ್ಯಾಸಂಸ್ಥೆಗಳ ಬೆಳ್ಳಿಹಬ್ಬ ಸಂಭ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ನಮ್ಮ ಆಶಯ ಮತ್ತು ಅಸ್ಮಿತೆಗೆ ಸೋಲಾಗದಂತೆ ನೋಕೊಂಡ ಕಾರಣ ನಮ್ಮ ಮೌಲ್ಯಗಳು ಉಳಿದಿದೆ. ಆದರೆ ಇಂದು ಜ್ಞಾನವನ್ನು ಎರವಲು ಪಡೆಯುವ ಕಾರಣ ನಮ್ಮ ಮಿದುಳು ಕ್ರಿಯಾಶೀಲವಾಗಿಲ್ಲ ಎಂದ ಅವರು ಮಕ್ಕಳ ಮನಸ್ಸನ್ನು ಕ್ರಿಯಾಶೀಲವಾಗಿ ಬೆಳೆಸಿ ಎಂದು ಕರೆ ನೀಡಿದರು.
ಸಮಾರಂಭವನ್ನು ಉದ್ಘಾಟಿಸಿದ ಶಾಸಕ ಎಸ್.ಅಂಗಾರ ನಮ್ಮ ಕನ್ನಡ ಶಾಲೆಗಳನ್ನು ಉಳಿಸುವ ಜವಬ್ದಾರಿ ಪ್ರತಿಯೊಬ್ಬರ ಮೇಲೆ ಕೂಡ ಇದೆ. ಆದರೆ ಬ್ರಿಟೀಷ್ ಶಿಕ್ಷಣ ವ್ಯವಸ್ಥೆಗೆ ಮತ್ತು ಆಂಗ್ಲ ಭಾಷಾ ವ್ಯಾಮೋಹದಿಂದ ನಮ್ಮ ಗ್ರಾಮೀಣ ಶಾಲೆಗಳು ಸೊರಗಿದೆ. ಸುಳ್ಯ ತಾಲೂಕಿನಲ್ಲಿ ಮಾತ್ರ 30 ಶಾಲೆಗಳು ಮಕ್ಕಳ ಕೊರತೆಯಿಂದ ಮುಚ್ಚುವ ಭೀತಿಯನ್ನು ಎದುರಿಸುತ್ತಿದೆ ಎಂದರು. ಶಿಕ್ಷಣವು ಬದುಕನ್ನು ಕಲಿಸುವಂತಿರಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ ಧರ್ಮ ಉಳಿದರೆ ಮಾತ್ರ ಸಮಾಜ, ದೇಶ ಉಳಿಯುತ್ತದೆ. ಆದುದರಿಂದ ಧರ್ಮ, ಸಂಸ್ಕೃತಿ ಮತ್ತು ಕುಟುಂಬ ಪದ್ಧತಿಯನ್ನು ಕಲಿಸುವ ಶಿಕ್ಷಣ ಇಂದಿನ ಅಗತ್ಯವಾಗಿದೆ. ದೇಶಕ್ಕೆ ಉತ್ತಮ ಪ್ರಜೆಗಳನ್ನು ನೀಡುವ ಧ್ಯೇಯ ಶಾಲೆಗಳಿಗಿರಬೇಕು ಎಂದರು.
ಸಂಸ್ಥೆಯ ಸ್ಥಾಪಕಾಧ್ಯಕ್ಷ ಕೆ.ಉಪೇಂದ್ರ ಕಾಮತ್ ಧ್ವಜಾರೋಹಣ ನೆರವೇರಿಸಿದರು. ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯೆ ಪುಷ್ಪಾವತಿ ಬಾಳಿಲ, ತಾ.ಪಂ.ಸದಸ್ಯ ತೀರ್ಥರಾಮ ಬಾಳಾಜೆ, ಜಾಲ್ಸೂರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ ಎಸ್.ಪಿ, ಕೆನರಾ ಬ್ಯಾಂಕ್ ಹಿರಿಯ ಪ್ರಬಂಧಕ ಮುರಾರ್ ಯಸ್.ಯಡ್ನಿಕ್ ಅತಿಥಿಗಳಾಗಿ ಭಾಗವಹಿಸಿದ್ದರು.
ಬೆಳ್ಳಿ ಹಬ್ಬ ಸ್ವಾಗತ ಸಮಿತಿಯ ಅಧ್ಯಕ್ಷ ಕೆ.ಮಧುಸೂಧನ ಕುಂಭಕ್ಕೋಡು, ಪ್ರಧಾನ ಕಾರ್ಯದರ್ಶಿಗಳಾದ ಜಯರಾಜ್ ಕುಕ್ಕೇಟಿ, ಸುಖೇಶ್ ಪದವು, ಜಯಪ್ರಸಾದ್ ಕಾರಿಂಜ, ಕೋಶಾಧ್ಯಕ್ಷ ಹೇಮಂತ್ ಕಾಮತ್, ಪ್ರಧಾನ ಸಂಯೋಜಕ ನ.ಸೀತಾರಾಮ, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯ ಗೋಪಾಲ ರಾವ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ಡಂತ್ತಡ್ಕ ಸ್ವಾಗತಿಸಿದರು. ಶಾಲಾ ಸಂಚಾಲಕ ಕೆ.ಸುಧಾಕರ ಕಾಮತ್ ಪ್ರಸ್ತಾವನೆಗೈದರು. ಗಣೇಶ್ ಕಾರ್ಯಕ್ರಮ ನಿರೂಪಿಸಿದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…