ಸುಳ್ಯ: ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತಾಲೂಕು ಪತ್ರಕರ್ತರ ಸಹಯೋಗದಲ್ಲಿ ನಡೆಯುವ ಪತ್ರಕರ್ತರ ಸಂಘದ ಗ್ರಾಮ ವಾಸ್ತವ್ಯದ ಪೂರ್ವಭಾವಿ ಸಭೆ ಡಿ.3.ರಂದು ಬೆಳಿಗ್ಗೆ 10.30ಕ್ಕೆ ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ ಶಾಸಕ ಎಸ್.ಅಂಗಾರ ಉಪಸ್ಥಿತಿಯಲ್ಲಿ ನಡೆಯಲಿದೆ.
ಶನಿವಾರ ಶಾಸಕರ ಜೊತೆ ಮಾತನಾಡಿ ದಿನ ನಿಗದಿ ಪಡಿಸಲಾಯಿತು. ಶಾಸಕರ ಜೊತೆ ಮಾತುಕತೆ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ, ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಜಿಲ್ಲಾ ಸಮಿತಿ ಸದಸ್ಯ ಗಂಗಾಧರ ಕಲ್ಲಪಳ್ಳಿ, ಸದಸ್ಯರಾದ ಗಂಗಾಧರ ಮಟ್ಟಿ, ಶಿವಪ್ರಸಾದ್ ಕೇರ್ಪಳ, ಕಿರಣ್ ಪ್ರಸಾದ್ ಕುಂಡಡ್ಕ, ಲೋಕೇಶ್ ಗುಡ್ಡೆಮನೆ, ವಿಖ್ಯಾತ್ ಬಾರ್ಪಣೆ, ದಿನೇಶ್ ಮಠ ಮತ್ತಿತರರು ಉಪಸ್ಥಿತರಿದ್ದರು.
ಡಿಸೆಂಬರ್ ತಿಂಗಳಲ್ಲಿ ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆಸಲು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭೆಯಲ್ಲಿ ನಿರ್ಧರಿಸಲಾಗಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…