ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಉದ್ಘಾಟನೆ

January 5, 2020
4:57 PM

ಸುಳ್ಯ: ಪ್ರತಿಯೊಂದು ಗ್ರಾಮ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ ಸಾಧ್ಯ. ಬದಲಾವಣೆಗಳು ಕೆಳ ಹಂತದಿಂದ ಆರಂಭ ಆಗಬೇಕು ಎಂದು ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಹೇಳಿದರು.

Advertisement
Advertisement

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ದ.ಕ.ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಹಾಗೂ ಮಡಪ್ಪಾಡಿ ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜನಸಾಮಾನ್ಯರು ಪತ್ರಕರ್ತರಲ್ಲಿ ಎಲ್ಲ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ. ಹೀಗಾಗಿ ಅವರ ಮೂಲಕ ಇಂಥ ಕಾರ್ಯಕ್ರಮಗಳು ನಡೆಯುತ್ತಿರುವುದು ಔಚಿತ್ಯಪೂರ್ಣ ಎಂದು ಅವರು ಹೇಳಿದರು. ಮಂಗಳೂರಿನಲ್ಲಿ ನಡೆದ ಘಟನೆಯ ಸಂದರ್ಭ ಮಾಧ್ಯಮಗಳು ಜವಾಬ್ದಾರಿ ಮಾಧ್ಯಮವಾಗಿ ಕೆಲಸ ಮಾಡಿದ್ದೀರಿ ಎಂದು ಅವರು ಪ್ರಶಂಸಿದರು.

Advertisement

ವೈದ್ಯಕೀಯ ಶಿಬಿರವನ್ನು ಸುಳ್ಯ ಶಾಸಕ ಎಸ್.ಅಂಗಾರ ಉದ್ಘಾಟಿಸಿದರು. ಕುತ್ಲೂರಿನಲ್ಲಿ ನಡೆದ ಗ್ರಾಮ ವಾಸ್ತವ್ಯದ ಮಾಹಿತಿ ಪತ್ರವನ್ನು ಅವರು ಬಿಡುಗಡೆಗೊಳಿಸಿದರು. ಮೂಲಭೂತ ಅಗತ್ಯಗಳಿಗೆ ಸಮರ್ಪಕವಾಗಿ ಯೋಜನೆಗಳನ್ನು ಮಾಡದಿರುವುದೇ ಕೆಲಸ ಪೂರ್ಣಗೊಳ್ಳದಿರಲು ಕಾರಣ. ಗ್ರಾಮಾಭಿವೃದ್ದಿಯ ಮೂಲಕ ದೇಶದ ಅಭಿವೃದ್ದಿ ಸಾಧ್ಯವಾಗಲಿ ಎಂದು ಆಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ವಹಿಸಿದ್ದರು. ಗ್ರಾಮ ವಾಸ್ತವ್ಯದಲ್ಲಿ ಬಂದ ಮನವಿಗಳನ್ನು ವಿಶೇಷ ಪ್ರಕರಣ ಎಂದು ಭಾವಿಸಿ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳು ಆಸ್ಥೆ ವಹಿಸಬೇಕು ಎಂದು ಅವರು ಹೇಳಿದರು.

Advertisement

ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣ ಆರ್, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಮಡಪ್ಪಾಡಿ ಗ್ರಾ.ಪಂ. ಅಧ್ಯಕ್ಷೆ ಶಕುಂತಲಾ ಕೇವಳ, ಉಪಾಧ್ಯಕ್ಷ ಎಂಟಿ. ಹೊನ್ನಪ್ಪ, ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ವಿಕ್ರಂ ಅಮಾಟೆ, ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಲ್, ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್, ಜಿ.ಪಂ.ಸದಸ್ಯರಾದ ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ, ಎಸ್.ಎನ್.ಮನ್ಮಥ, ತಾ.ಪಂ.ಉಪಾಧ್ಯಕ್ಷೆ ಶುಭದಾ ರೈ, ತಾ.ಪಂ.ಸದಸ್ಯ ಉದಯಕುಮಾರ್ ಕೊಪ್ಪಡ್ಕ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್, ಎ.ಪಿ.ಎಂ.ಸಿ. ನಿರ್ದೇಶಕ ವಿನಯಕುಮಾರ್ ಮುಳುಗಾಡು, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಂ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ, ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ ಮೊದಲಾದವರು ಉಪಸ್ಥಿತರಿದ್ದರು.

Advertisement

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸಮಿತಿ ಸದಸ್ಯ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಆಶಯ ಭಾಷಣ ಮಾಡಿದರು. ಜಿಲ್ಲಾ ಕಾರ್ಯಕಾರಣಿ ಸದಸ್ಯ ಲೋಕೇಶ್ ಪೆಲರ್ಂಪಾಡಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಪತ್ರಕರ್ತರ ಸಂಘದ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು.

ಕಳೆದ ಬಾರಿ ಗ್ರಾಮ ವಾಸ್ತವ್ಯ ನಡೆದ ಕುತ್ಲೂರಿನ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ರಾಮಚಂದ್ರ ಭಟ್, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮನೋಹರ ಬಳಂಜ ಅವರನ್ನು ಗೌರವಿಸಲಾಯಿತು. ರಾಮಚಂದ್ರ ಭಟ್ ಅನುಭವ ವ್ಯಕ್ತಪಡಿಸಿದರು.

Advertisement

 

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೋವಿಜ್ಞಾನ, ವಿಷಮುಕ್ತ ಕೃಷಿ ಹಾಗೂ ಗ್ರಾಮೋದ್ಯೋಗ ಆಧಾರಿತ ಸ್ವಾವಲಂಬಿ ಗ್ರಾಮ ನಿರ್ಮಾಣದ ಮಹಾ ಶಿಬಿರ
March 20, 2024
4:04 PM
by: The Rural Mirror ಸುದ್ದಿಜಾಲ
ಅರ್ಥಿಕ ಬೆಳೆಯಾಗಿ ಬಿದಿರು | ಬಿದಿರು ಬೆಳೆಸುವ ಕುರಿತು ವಿಚಾರ ವಿನಿಮಯ ಸಭೆ
March 18, 2024
2:05 PM
by: The Rural Mirror ಸುದ್ದಿಜಾಲ
ನಿಮಗೆ ಹಾಲು ಕರೆಯಲು ಬರುತ್ತಾ..? ಹಾಗಾದ್ರೆ ಹಾಲು ಕರೆಯಿರಿ, ಭರ್ಜರಿ ಬಹುಮಾನ ಗೆಲ್ಲಿರಿ..
February 10, 2024
12:18 PM
by: The Rural Mirror ಸುದ್ದಿಜಾಲ
ಲಾಲ್‌ಬಾಗ್‌ ಫ್ಲವರ್‌ ಶೋ | ಪ್ರವಾಸಿಗರನ್ನು ಕೈಬೀಸಿ ಕರೆದ ಸಸ್ಯಕಾಶಿ : ಭರ್ಜರಿ ರೆಸ್ಪಾನ್ಸ್, ಕೋಟಿ ಮೀರಿದ ಆದಾಯ
January 27, 2024
11:51 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror