ಮಡಪ್ಪಾಡಿ ಯಲ್ಲಿ ಸಿಎಂ ಗ್ರಾಮ ವಾಸ್ತವ್ಯ…?

June 26, 2019
3:14 PM

ಸುಳ್ಯ: ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರ ಗ್ರಾಮ ನಡೆಯಲಿದೆಯೇ.? ಹೀಗೊಂದು ಸಾಧ್ಯತೆಗಳ ಬಗ್ಗೆ ಈಗ ಚರ್ಚೆ ನಡೆಯುತಿದ್ದು ನಿರೀಕ್ಷೆ ಗರಿಗೆದರಿದೆ.

Advertisement
Advertisement
Advertisement

ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ ನಡೆಸಲು ಕೆಲವೊಂದು ಮಾನದಂಡಗಳನ್ನು ಸರಕಾರ ನಿಗದಿ ಪಡಿಸಿದೆ. ಈ ಮಾನದಂಡ ಪ್ರಕಾರ ಗ್ರಾಮ ವಾಸ್ತವ್ಯ ನಡೆಸಬಹುದಾದ ಸಾಧ್ಯತಾ ಪಟ್ಟಿಯಲ್ಲಿ ಸುಳ್ಯ ತಾಲೂಕಿನ ಮಡಪ್ಪಾಡಿ ಸೇರಿ ಜಿಲ್ಲೆಯ ಎರಡು ಗ್ರಾಮಗಳು ಸೇರಲಿದೆ ಎಂದು ಹೇಳಲಾಗಿದೆ.
ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮಕ್ಕೆ ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯದ ಮಾನದಂಡ ಪ್ರಕಾರ ಸಾಧ್ಯತೆ ಇದ್ದಲ್ಲಿ ಸುಳ್ಯ ತಾಲೂಕಿಗೆ ಮುಖ್ಯಮಂತ್ರಿಗಳನ್ನು ಕರೆ ತರುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನ ನಡೆಸಲಾಗುವುದು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ ಹೇಳಿದ್ದಾರೆ.
ಒಟ್ಟಿನಲ್ಲಿ ಸುಳ್ಯ ತಾಲೂಕಿಗೆ ಸಿಎಂ ಗ್ರಾಮ ವಾಸ್ತವ್ಯ ಭಾಗ್ಯ ಒದಗಿ ಬಂದಲ್ಲಿ ಹೊಸತೊಂದು ದಾಖಲೆ ನಿರ್ಮಾಣವಾಗಲಿದೆ.
ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೋಲ್ಚಾರ್ ಸರಕಾರಿ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ನಡೆಸುವಂತೆ ಸುಳ್ಯದ ವಕೀಲ ಧರ್ಮಪಾಲ ಕೊಯಿಂಗಾಜೆ ಇತ್ತೀಚೆಗೆ ಟ್ವಿಟ್ಟರ್ ಮೂಲಕ ಆಹ್ವಾನ ನೀಡಿ ಸಿಎಂ ಗಮನ ಸೆಳೆಯುವ ಪ್ರಯತ್ನವನ್ನು ಇತ್ತೀಚೆಗೆ ನಡೆಸಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಳೆಗಾರರು ಏಕೆ ಜಾಗ್ರತರಾಗಬೇಕಿದೆ..?
January 22, 2025
6:48 AM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕಾಲಾವಧಿ ನೇಮ
January 21, 2025
3:55 PM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕನ್ನಡ ದೇವತೆ ನೇಮ | ತುಳುನಾಡಿನಲ್ಲಿ ಈಗ ನೇಮ-ನಡಾವಳಿ ದಿನಗಳು |
January 21, 2025
3:50 PM
by: ದ ರೂರಲ್ ಮಿರರ್.ಕಾಂ
ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror