ಮಡಪ್ಪಾಡಿ: ಮಡಿಕೇರಿ ಗ್ರಾಮಸ್ಥರ ಪ್ರಧಾನ ಬೇಡಿಕೆಯಾದ ರಸ್ತೆ ಅಭಿವೃದ್ದಿಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ಸುಳ್ಯ ಶಾಸಕರೊಂದಿಗೆ ಸೇರಿ ಸರ್ವ ಪ್ರಯತ್ನ ಮಾಡುವುದಾಗಿ ಮಾಜಿ ಉಸ್ತುವಾರಿ ಸಚಿವ, ಮಂಗಳೂರು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.
ಮಡಪ್ಪಾಡಿಯಲ್ಲಿ ನಡೆಯುತ್ತಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಅವರು, ರಸ್ತೆ ದುಸ್ಥಿತಿಯನ್ನು ನಾನೇ ಕಣ್ಣಾರೆ ಅರಿತುಕೊಂಡಿದ್ದೇನೆ. ನನ್ನ ಕ್ಷೇತ್ರದಲ್ಲಿ ತೀರಾ ಗ್ರಾಮೀಣ ಪ್ರದೇಶಗಳಲ್ಲೂ ಇಂತಹ ರಸ್ತೆಗಳಿಲ್ಲ. ಕೆ.ಎಸ್.ಈಶ್ವರಪ್ಪರೊಂದಿಗೆ ನಾನೇ ಅನುದಾನ ತರಿಸಿದ್ದೇನೆ. ಇಲ್ಲಿಗೂ ಅನುದಾನಕ್ಕೆ ಮುಖ್ಯಮಂತ್ರಿಗಳೊಂದಿಗೆ, ಈಶ್ವರಪ್ಪರೊಂದಿಗೆ ಶಾಸಕರ ಜತೆ ಸೇರಿ ಮಾತನಾಡುತ್ತೇನೆ ಎಂದು ಖಾದರ್ ಹೇಳಿದರು.
ಗ್ರಾಮ ವಾಸ್ತವ್ಯದ ಮೂಲಕ ಒಂದೇ ದಿನದಲ್ಲಿ ಮ್ಯಾಜಿಕ್ ನಡೆಯುತ್ತದೆ ಎಂದು ಗ್ರಾಮಸ್ಥರು ಭಾವಿಸಬಾರದು. ಆದರೆ ಅಧಿಕಾರಿಗಳು ಜನರ ಬೇಡಿಕೆಯ ಬೆನ್ನು ಬಿದ್ದು ಕೆಲಸ ಆಗುವಂತೆ ನೋಡಿಕೊಳ್ಳಬೇಕು ಎಂದು ಖಾದರ್ ಹೇಳಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel