ಮಡಪ್ಪಾಡಿ : ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ಭಾನುವಾರ ಮಡಪ್ಪಾಡಿ ಯುವಕ ಮಂಡಲದ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಪಿಸಿ ಜಯರಾಮ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘವು 24.15 ಲಕ್ಷ ಲಾಭ ಹೊಂದಿದ್ದು ಸದಸ್ಯರಿಗೆ ಶೇ.8.5 ಡಿವಿಡೆಂಡ್ ಘೋಷಿಸಲಾಗಿದೆ.
ಸಭೆಯಲ್ಲಿ ರೈತರ ಸಾಲಮನ್ನಾ ಬಾರದಿರುವ ಬಗ್ಗೆ ರೈತರು ಅಸಮಾಧಾನ ವ್ಯಕ್ತಪಡಿಸಿದರು. ಮಡಪ್ಪಾಡಿಯಲ್ಲಿ 5 ಜನಕ್ಕೆ ಮಾತ್ರ ಸಾಲಮನ್ನಾ ಬಂದಿದೆ. ಈ ಬಗ್ಗೆ ರೈತರು ಸೇರಿ ತಾಲೂಕು ಕಚೇರಿ ಅಥವಾ ಡಿಸಿಸಿ ಬ್ಯಾಂಕ್ ಎದುರು ಪ್ರತಿಭಟನೆ ನಡೆಸುವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಾಲಮನ್ನಾ ಸೆಪ್ಟೆಂಬರ್ ಒಳಗೆ ಬಾರದಿದ್ದರೇ ಹೋರಾಟಕ್ಕೆ ಸಿದ್ಧತೆ ನಡೆಸೋಣ ಎಂದು ಅಧ್ಯಕ್ಷ ಪಿಸಿ ಜಯರಾಮ ಹೇಳಿದರು.
ಸಭೆಯಲ್ಲಿ ಉಪಾಧ್ಯಕ್ಷ ಮಿತ್ರದೇವ ಮಡಪ್ಪಾಡಿ, ನಿರ್ದೇಶಕರಾದ ಸೋಮಶೇಖರ ಕೇವಳ, ಭವಾನಿಶಂಕರ ಬಾಳಿಕಳ, ಜಯರಾಮ ಹಾಡಿಕಲ್ಲು, ಅಜಯ್ ವಾಲ್ತಾಜೆ,ರಾಜಕುಮಾರ ಪೂಂಬಾಡಿ,ತಾರಾ ಜಿಸಿ, ಪ್ರವೀಣ ಯತೀಂದ್ರನಾಥ್, ಮೋಹನದಾಸ್ ಹಾಡಿಕಲ್ಲು ಉಪಸ್ಥಿತರಿದ್ದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಪೂಂಬಾಡಿ ವರದಿ ವಾಚಿಸಿದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.