ಮಡಿಕೇರಿ : ಕಿವಿ, ಮೂಗು ಮತ್ತು ಗಂಟಲು (ಇಎನ್‍ಟಿ) ತಜ್ಞರ ಮೂರು ದಿನಗಳ ರಾಜ್ಯ ಮಟ್ಟದ 37ನೇ ಸಮ್ಮೇಳನ ಸೆ.27ರಿಂದ 29ರವರೆಗೆ ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ (ಮೆಡಿಕಲ್ ಕಾಲೇಜು) ಸಭಾಂಗಣದಲ್ಲಿ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಇಎನ್‍ಟಿ ಶಶ್ತ್ರಚಿಕಿತ್ಸಕರ ಸಂಘದ ಕೊಡಗು ಘಟಕದ ಅಧ್ಯಕ್ಷ ಡಾ. ಮೋಹನ್ ಅಪ್ಪಾಜಿ ಅವರು, ಇಎನ್‍ಟಿ ಶಸ್ತ್ರಚಿಕಿತ್ಸಕರ ಸಂಘಟನೆಯ ಕೊಡಗು ಮತ್ತು ಕರ್ನಾಟಕ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಹಯೋಗದಲ್ಲಿ ಇದೇ ಪ್ರಥಮ ಬಾರಿಗೆ ಕೊಡಗಿನಲ್ಲಿ ರಾಜ್ಯ ಮಟ್ಟದ ಸಮ್ಮೇಳನ ನಡೆಯಲಿದೆ ಎಂದರು. ರಾಜ್ಯದ ವಿವಿಧೆಡೆಯ ಸುಮಾರು 500ಕ್ಕೂ ಅಧಿಕ ಮಂದಿ ವೈದ್ಯರು ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಸಮ್ಮೇಳನದಲ್ಲಿ ನುರಿತ ಇಎನ್‍ಟಿ ತಜ್ಞರಿಂದ ಉಪನ್ಯಾಸ, ಆಹ್ವಾನಿತ ಮಾತುಕತೆಗಳು, ಚರ್ಚೆಗಳು, ವಿಚಾರ ಸಂಕಿರಣ ಮತ್ತು ಪ್ರಾಯೋಗಿಕ ಕಾರ್ಯಾಗಾರಗಳು ನಡೆಯಲಿದ್ದು, ಕರ್ನಾಟಕ ಮಾತ್ರವಲ್ಲದೆ, ಹೊರ ರಾಜ್ಯಗಳ ಇಎನ್‍ಟಿ ಶಸ್ತ್ರಚಿಕಿತ್ಸಕರೂ ಉಪನ್ಯಾಸಗಳನ್ನು ನೀಡಲಿದ್ದಾರೆ. ಮುಖ್ಯವಾಗಿ ಇಎನ್‍ಟಿ ಶಸತ್ರಚಿಕಿತ್ಸಕರ ಸಂಘಟನೆಯ ಅಧ್ಯಕ್ಷ ಸತ್ಯಪ್ರಕಾಶ್, ರಾಜೀವಗಾಂಧಿ ವೈದ್ಯಕೀಯ ವಿವಿಯ ಸಚ್ಚಿದಾನಂದ ಮತ್ತಿತರರು ಮಾಹಿತಿ ನೀಡಲಿದ್ದಾರೆ. ಪ್ರಾಯೋಗಿಕವಾಗಿ ಯುವ ಶಸ್ತ್ರಚಿಕಿತ್ಸಕರಿಗೆ ತರಬೇತಿ ನೀಡುವ ಉದ್ದೇಶದಿಂದ ಈ ಸಮ್ಮೇಳನವನ್ನು ಆಯೋಜಿಸಲಾಗುತ್ತಿದ್ದು, ಆ ನಿಟ್ಟಿನಲ್ಲಿ ನಾಲ್ಕು ಪ್ರಾಯೋಗಿಕ ಕಾರ್ಯಾಗಾರಗಳನ್ನು ನಡೆಸಲಾಗುತ್ತದೆ. ಅಲ್ಲದೆ ಮೆಡಿಕೋ-ಲೀಗಲ್ ಪ್ಯಾನಲ್ ಕೂಡ ನಡೆಯಲಿದ್ದು, ಇದರಲ್ಲಿ ಖ್ಯಾತ ವೈದ್ಯರು, ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು ನುರಿತ ವಕೀಲರು ಭಾಗವಹಿಸಿ ಇಂದಿನ ವೈದ್ಯಕೀಯ ವೃತ್ತಿಯಲ್ಲಿ ಕಾನೂನು ಅಂಶಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಡಾ.ಮೋಹನ್ ಅಪ್ಪಾಜಿ ವಿವರಿಸಿದರು.
ಗೋಷ್ಠಿಯಲ್ಲಿ ಹಾಜರಿದ್ದ ಇಎನ್‍ಟಿ ಶಸ್ತ್ರಚಿಕಿತ್ಸಕರ ಸಂಘಟನೆಯ ಕೊಡಗು ಜಿಲ್ಲಾ ಕಾರ್ಯದರ್ಶಿ ಡಾ. ಶ್ವೇತಾ ಅವರು ಈ ಸಮ್ಮೇಳನಕ್ಕೆ ಸಮಾನಾಂತರವಾಗಿ ಸೆ.28ರಂದು ಶ್ರವಣ ಮತ್ತು ವಾಕ್ ಭಾಷಾ ತಜ್ಞರುಗಳಿಗಾಗಿ ಸಮ್ಮೇಳನ ನಡೆಯಲಿದೆ ಎಂದು ತಿಳಿಸಿದರು.
ವೃತ್ತಿ ಜೀವನದಲ್ಲಿ ಉತ್ತುಂಗಕ್ಕೇರಿ ಛಾಪು ಮೂಡಿಸಿರುವ ಖ್ಯಾತ ವೈದ್ಯರು ಮತ್ತು ಸ್ಥಳೀಯ ಕ್ರೀಡಾಪಟುಗಳನ್ನು ಸೆ.27ರಂದು ಸನ್ಮಾನಿಸಲಾಗುವುದು. ಜಿಲ್ಲೆಯ ಪ್ರಥಮ ಇಎನ್‍ಟಿ ತಜ್ಞ ಡಾ. ಸಿ.ಎಂ.ದೇವಯ್ಯ, ಕ್ರೀಡಾಪಟು ಅರ್ಜುನ್ ದೇವಯ್ಯ ಸೇರಿದಂತೆ ಹಲವು ಮಂದಿ ಸನ್ಮಾನ ಸ್ವೀಕರಿಸಲಿದ್ದಾರೆ ಎಂದು ಡಾ. ಅಚ್ಚಯ್ಯ ಅವರು ತಿಳಿಸಿದರು .
ಸಮ್ಮೇಳನದ ಕುರಿತ ಹೆಚ್ಚಿನ ಮಾಹಿತಿಗಾಗಿ ಡಾ. ಮೋಹನ್ ಅಪ್ಪಾಜಿ (9845471569) ಡಾ. ಶ್ವೇತಾ (9535659298) ಡಾ. ವಿನಯ್ ಎಸ್.ಆರ್. (9481500743) ಅವರನ್ನು ಸಂಪರ್ಕಿಸಬಹುದಾಗಿದೆ. ಸುದ್ದಿಗೋಷ್ಠಿಯಲ್ಲಿ ಡಾ. ಪಂಚಮ್ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…