ಮಡಿಕೇರಿಯಲ್ಲಿ ಕಾರ್ಗಿಲ್ ಹುತಾತ್ಮ ಯೋಧರಿಗೆ ನಮನ

July 26, 2019
10:20 PM

ಮಡಿಕೇರಿ: ಕಾರ್ಗಿಲ್‍ನ್ನು ಅತಿಕ್ರಮಿಸಿಕೊಂಡ ಪಾಕಿಸ್ತಾನವನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿದ ಭಾರತೀಯ ಸೈನ್ಯದ ವೀರೋಚಿತ ಗೆಲುವಿಗೆ ಎರಡು ದಶಕಗಳು ಸಂದ ಅಪೂರ್ವ ದಿನವನ್ನು, ನಗರದ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸುವ ಮೂಲಕ ಹೃದಯ ಸ್ಪರ್ಶಿಯಾಗಿ ಆಚರಿಸಲಾಯಿತು.

Advertisement

ಭಾರತೀಯರು ಮರೆಯಲಾಗದ ಕಾರ್ಗಿಲ್ ಯುದ್ಧ 1999ರ ಮೇ ತಿಂಗಳಿನಲ್ಲಿ ಆರಂಭಗೊಂಡು 74 ದಿನಗಳ ಕಾಲ ನಡೆದು, ಭಾರತೀಯ ಸೈನ್ಯ ತನ್ನ ಅಸಾಮಾನ್ಯ ಶೌರ್ಯ, ಪರಾಕ್ರಮಗಳ ಮೂಲಕ ಪಾಕಿಸ್ತಾನಕ್ಕೆ ತಕ್ಕ ಪಾಠವನ್ನು ಕಲಿಸಿತ್ತು. ಈ ಹಂತದಲ್ಲಿ ಮಡಿದ ಭಾರತದ ವೀರ ಯೋಧರಿಗೆ ನಗರದ ಯುದ್ಧ ಸ್ಮಾರಕದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ನಡೆದ ‘ಕಾರ್ಗಿಲ್ ವಿಜಯ್ ದಿವಸ್’ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆಯ ಮೂಲಕ ಗೌರವ ನಮನ ಸಲ್ಲಿಸಲಾಯಿತು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಹಾನರರಿ ಸುಬೇದಾರ್ ಮೇಜರ್ ಆನಂದ್ ಅವರು, ಯುದ್ಧ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಸೈನಿಕ ಕಲ್ಯಾಣ ಮಂಡಳಿ ಜಂಟಿ ನಿರ್ದೇಶಕರಾದ ಗೀತಾ ಶೆಟ್ಟಿ, ಮೇಜರ್ ಒ.ಎಸ್.ಚಿಂಗಪ್ಪ, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ನರಸಿಂಹ, ನಗರಸಭಾ ಮಾಜಿ ಸದಸ್ಯರುಗಳಾದ ಅನಿತಾ ಪೂವಯ್ಯ, ಟಿ.ಎಸ್. ಪ್ರಕಾಶ್, ಬಿಜೆಪಿ ನಗರ ಕಾರ್ಯದರ್ಶಿ ಮನು ಮಂಜುನಾಥ್, ಕಡಗದಾಳು ಗಣೇಶ್, ಬಿ.ಎಂ. ರವಿ, ಅರುಣ್ ಕುಮಾರ್, ಬಜರಂಗ ದಳದ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಪುಷ್ಪ ನಮನ ಸಲ್ಲಿಸಿ ಹುತಾತ್ಮರಿಗೆ ಗೌರವ ಸಲ್ಲಿಸಿದರು.

ಸೈನಿಕ ಕಲ್ಯಾಣ ಮಂಡಳಿಯ ಜಂಟಿ ನಿರ್ದೇಶಕಿ ಗೀತಾ ಶೆಟ್ಟಿ ಈ ಸಂದರ್ಭ ಮಾತನಾಡಿ, ಭಾರತೀಯ ಸೈನ್ಯವು ಎಂತಹುದ್ದೇ ಯುದ್ಧವನ್ನು ಸಮರ್ಥವಾಗಿ ಎದುರಿಸುವ ಅಪ್ರತಿಮ ಶಕ್ತಿ ಸಾಮಥ್ರ್ಯವನ್ನು ಹೊಂದಿದೆಯೆಂದು ಹೆಮ್ಮೆ ವ್ಯಕ್ತಪಡಿಸಿದರು.
ಹಿಂದೂ ಪರ ಸಂಘಟನೆಯ ಚಿ.ನಾ.ಸೋಮೇಶ್ ದಿನದ ಮಹತ್ವದ ಕುರಿತು ಮಾತನಾಡಿ, ಹಿಮಚ್ಛಾದಿತ ಕಾರ್ಗಿಲ್‍ನಲ್ಲಿ ನಡೆದ ಯುದ್ಧದಲ್ಲಿ ಭಾರತದ 527 ವೀರ ಯೋಧರು ಪ್ರಾಣಾರ್ಪಣೆಗೈದಿದ್ದು, ಅವರಲ್ಲಿ ಕೊಡಗಿನ ವೀರಯೋಧರೂ ಸೇರಿದ್ದಾರೆ ಎಂದು ತಿಳಿಸಿದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!
July 11, 2025
7:33 AM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ
July 11, 2025
7:14 AM
by: The Rural Mirror ಸುದ್ದಿಜಾಲ
ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ
July 11, 2025
7:11 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group