ಮಡಿಕೇರಿ: ಕಾರ್ಗಿಲ್‍ನ್ನು ಅತಿಕ್ರಮಿಸಿಕೊಂಡ ಪಾಕಿಸ್ತಾನವನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿದ ಭಾರತೀಯ ಸೈನ್ಯದ ವೀರೋಚಿತ ಗೆಲುವಿಗೆ ಎರಡು ದಶಕಗಳು ಸಂದ ಅಪೂರ್ವ ದಿನವನ್ನು, ನಗರದ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸುವ ಮೂಲಕ ಹೃದಯ ಸ್ಪರ್ಶಿಯಾಗಿ ಆಚರಿಸಲಾಯಿತು.
ಭಾರತೀಯರು ಮರೆಯಲಾಗದ ಕಾರ್ಗಿಲ್ ಯುದ್ಧ 1999ರ ಮೇ ತಿಂಗಳಿನಲ್ಲಿ ಆರಂಭಗೊಂಡು 74 ದಿನಗಳ ಕಾಲ ನಡೆದು, ಭಾರತೀಯ ಸೈನ್ಯ ತನ್ನ ಅಸಾಮಾನ್ಯ ಶೌರ್ಯ, ಪರಾಕ್ರಮಗಳ ಮೂಲಕ ಪಾಕಿಸ್ತಾನಕ್ಕೆ ತಕ್ಕ ಪಾಠವನ್ನು ಕಲಿಸಿತ್ತು. ಈ ಹಂತದಲ್ಲಿ ಮಡಿದ ಭಾರತದ ವೀರ ಯೋಧರಿಗೆ ನಗರದ ಯುದ್ಧ ಸ್ಮಾರಕದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ನಡೆದ ‘ಕಾರ್ಗಿಲ್ ವಿಜಯ್ ದಿವಸ್’ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆಯ ಮೂಲಕ ಗೌರವ ನಮನ ಸಲ್ಲಿಸಲಾಯಿತು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಹಾನರರಿ ಸುಬೇದಾರ್ ಮೇಜರ್ ಆನಂದ್ ಅವರು, ಯುದ್ಧ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಸೈನಿಕ ಕಲ್ಯಾಣ ಮಂಡಳಿ ಜಂಟಿ ನಿರ್ದೇಶಕರಾದ ಗೀತಾ ಶೆಟ್ಟಿ, ಮೇಜರ್ ಒ.ಎಸ್.ಚಿಂಗಪ್ಪ, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ನರಸಿಂಹ, ನಗರಸಭಾ ಮಾಜಿ ಸದಸ್ಯರುಗಳಾದ ಅನಿತಾ ಪೂವಯ್ಯ, ಟಿ.ಎಸ್. ಪ್ರಕಾಶ್, ಬಿಜೆಪಿ ನಗರ ಕಾರ್ಯದರ್ಶಿ ಮನು ಮಂಜುನಾಥ್, ಕಡಗದಾಳು ಗಣೇಶ್, ಬಿ.ಎಂ. ರವಿ, ಅರುಣ್ ಕುಮಾರ್, ಬಜರಂಗ ದಳದ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಪುಷ್ಪ ನಮನ ಸಲ್ಲಿಸಿ ಹುತಾತ್ಮರಿಗೆ ಗೌರವ ಸಲ್ಲಿಸಿದರು.
ಸೈನಿಕ ಕಲ್ಯಾಣ ಮಂಡಳಿಯ ಜಂಟಿ ನಿರ್ದೇಶಕಿ ಗೀತಾ ಶೆಟ್ಟಿ ಈ ಸಂದರ್ಭ ಮಾತನಾಡಿ, ಭಾರತೀಯ ಸೈನ್ಯವು ಎಂತಹುದ್ದೇ ಯುದ್ಧವನ್ನು ಸಮರ್ಥವಾಗಿ ಎದುರಿಸುವ ಅಪ್ರತಿಮ ಶಕ್ತಿ ಸಾಮಥ್ರ್ಯವನ್ನು ಹೊಂದಿದೆಯೆಂದು ಹೆಮ್ಮೆ ವ್ಯಕ್ತಪಡಿಸಿದರು.
ಹಿಂದೂ ಪರ ಸಂಘಟನೆಯ ಚಿ.ನಾ.ಸೋಮೇಶ್ ದಿನದ ಮಹತ್ವದ ಕುರಿತು ಮಾತನಾಡಿ, ಹಿಮಚ್ಛಾದಿತ ಕಾರ್ಗಿಲ್‍ನಲ್ಲಿ ನಡೆದ ಯುದ್ಧದಲ್ಲಿ ಭಾರತದ 527 ವೀರ ಯೋಧರು ಪ್ರಾಣಾರ್ಪಣೆಗೈದಿದ್ದು, ಅವರಲ್ಲಿ ಕೊಡಗಿನ ವೀರಯೋಧರೂ ಸೇರಿದ್ದಾರೆ ಎಂದು ತಿಳಿಸಿದರು.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…